ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಸ್ತೆ ಅಪಘಾತ ಪ್ರಕರಣಗಳಿಗೆ ಕಡಿವಾಣ ಹಾಕಲು ಬೆಂಗಳೂರು ಪೊಲೀಸರು ದಿಟ್ಟ ಕ್ರಮಕ್ಕೆ ಮುಂದಾಗಿದ್ದಾರೆ. ಹಾಗಾಗಿ ಬೆಂಗಳೂರಿನಲ್ಲಿ ಪ್ರತಿ ಗುರುವಾರದಿಂದ ಭಾನುವಾರದ ವರೆಗೆ ಡ್ರಂಕ್ ಅಂಡ್ ಡ್ರೈವ್ (Drink and Drive) ತಪಾಸಣೆ ನಡೆಸುವಂತೆ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್. ಅನುಚೇತ್ ಆದೇಶ ಹೊರಿಸಿದ್ದಾರೆ.
ಆಗಸ್ಟ್ 22ರ ಗುರುವಾರದಿಂದಲೇ ನಗರದಲ್ಲಿ ಡ್ರಂಕ್ ಆಂಡ್ ಡ್ರೈವ್ ತಪಾಸಣೆಗೆ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: Jhakhand | ಹೊಸ ರಾಜಕೀಯ ಪಕ್ಷ ಆರಂಭಿಸುವ ಸುಳಿವು ನೀಡಿದ ಚಂಪೈ ಸೊರೆನ್
ಆದೇಶ ಪ್ರತಿಯಲ್ಲಿ ಏನಿದೆ?
ಬೆಂಗಳೂರು ನಗರದಲ್ಲಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ಸಂಚಾರ ವಿಭಾಗದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ವಾರಾಂತ್ಯದ ಗುರುವಾರದಿಂದ ಭಾನುವಾರದವರೆಗೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ವಾಹನ ಸವಾರರು/ಚಾಲಕರುಗಳ ವಿರುದ್ಧ ಪ್ರತಿವಾರ ಠಾಣೆಯ ಎಲ್ಲಾ ಪಿ.ಎಸ್.ಐಗಳು ಕಡ್ಡಾಯವಾಗಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲು ಕ್ರಮ ವಹಿಸಬೇಕು.
ಪ್ರಕರಣಗಳನ್ನು ದಾಖಲಿಸಲು ಠಾಣಾ ವ್ಯಾಪ್ತಿಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿರುವ ಜಂಕ್ಷನ್‌ಗಳಲ್ಲಿ ಮಾತ್ರ ಪ್ರಕರಣಗಳನ್ನು ದಾಖಲಿಸುವುದು ಹಾಗೂ ದಾಖಲಿಸುವ ಸಮಯದಲ್ಲಿ ಕಡ್ಡಾಯವಾಗಿ ಮಹಿಳಾ ಸಿಬ್ಬಂದಿಗಳನ್ನೂ ಸಹ ಕಾರ್ಯಾಚರಣೆಗೆ ನೇಮಿಸಬೇಕು ಎಂದು ಸೂಚಿಸಿದ್ದಾರೆ.