ಯಾದಗಿರಿ: ಬಸ್ (BUS) ನಿಲ್ಲಿಸಲಿಲ್ಲ ಎಂದು ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಕೆಎಸ್‌ಆರ್‌ಟಿಸಿ (KSRTC) ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಯಾದಗಿರಿಯಲ್ಲಿ (Yadgiri) ನಡೆದಿದೆ.
ಸುರಪುರದಿಂದ ಯಾದಗಿರಿಗೆ ಬರುತ್ತಿದ್ದ ಸರ್ಕಾರಿ ಬಸ್‍ನಲ್ಲಿ ಮಹಿಳೆಯರು ಸಾಕಷ್ಟು ಪ್ರಮಾಣದಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಪೂರ್ತಿ ರಶ್ ಆಗಿತ್ತು. ಇದರಿಂದಾಗಿ ಚಾಲಕ ಬಸ್ ನಿಲ್ಲಿಸಿರಲಿಲ್ಲ. ಇದೇ ಕಾರಣಕ್ಕೆ ನಶೆಯಲ್ಲಿದ್ದ ವ್ಯಕ್ತಿ ಡ್ರೈವರ್ ಹಾಗೂ ಕಂಡಕ್ಟರ್‍ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಬಳಿಕ ಡ್ರೈವರ್ ಮೇಲೆ ಹಲ್ಲೆ ಮಾಡಿದ್ದಾನೆ. ಇದನ್ನೂ ಓದಿ: ಎಣ್ಣೆ ಏಟಲ್ಲಿ ಭಂಡ ಧೈರ್ಯದಿಂದ ಮೂರು ದಶಕದ ಹಿಂದಿನ ಕೊಲೆ ರಹಸ್ಯ ಬಾಯ್ಬಿಟ್ಟ!
ನಿಂಗಣ್ಣ ಹಲ್ಲೆಗೊಳಗಾದ ಚಾಲಕನಾಗಿದ್ದು, ಚಂದಪ್ಪ ಕುಡಿದ ನಶೆಯಲ್ಲಿ ಹಲ್ಲೆ ಮಾಡಿದ ವ್ಯಕ್ತಿಯಾಗಿದ್ದಾನೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ವಡಗೇರ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಸಂಬಂಧ ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಯಚೂರು ನಗರದಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: 144 ಸೆಕ್ಷನ್ ಜಾರಿ ಮೂಲಕ ಕಾಲುವೆಗೆ ನೀರು