ಚಂಡೀಗಢ: 35 ವರ್ಷದ ತಂದೆಯೊಬ್ಬ ಕುಡಿದ ಮತ್ತಿನಲ್ಲಿ 12 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಹರಿಯಾಣದ ಗುರುಗ್ರಾಮ್ ನಲ್ಲಿ ನಡೆದಿದೆ.
ಈ ಕೃತ್ಯದ ನಂತರ ಆರೋಪಿ ತಂದೆ ಪರಾರಿಯಾಗಿದ್ದು, ಆತನನ್ನು ಭಾನುವಾರ ಬೆಳಿಗ್ಗೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಈ ಕೃತ್ಯ ಎಸಗಿದಾಗ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ತಿಳಿದು ಬಂದಿದೆ. ಈ ಕುರಿತು ಮನೆಸಾರ್ ಮಹಿಳಾ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿದೆ.
Advertisement
Advertisement
ಏನಿದು ಪ್ರಕರಣ?
ಸಂತ್ರಸ್ತೆಯ ತಾಯಿ ಶನಿವಾರ ಬೆಳಿಗ್ಗೆ ಸುಮಾರು 8 ಗಂಟೆಗೆ ಕೆಲಸಕ್ಕೆಂದು ತೆರಳಿದ್ದರು. ಆಕೆಯ ಹಿರಿಯ ಸಹೋದರು ಕೂಡ ಶಾಲೆಗೆ ಹೋಗಿದ್ದರು. ತಾನು ಮನೆಯಿಂದ ಹೋಗುವಾಗಲೇ ಆರೋಪಿ ಕುಡಿದಿದ್ದ ಎಂದು ಸಂತ್ರಸ್ತೆ ತಾಯಿ ತಿಳಿಸಿದ್ದಾರೆ. ಸಂತ್ರಸ್ತೆ ಅನಾರೋಗ್ಯದ ಕಾರಣದಿಂದ ಶಾಲೆಗೆ ಹೋಗದೆ ಮನೆಯಲ್ಲಿಯೇ ಉಳಿದುಕೊಂಡಿದ್ದಳು. ಇತ್ತ ಆರೋಪಿಯ ಮತ್ತಿಬ್ಬರು ಮಕ್ಕಳು ಮನೆಗೆ ವಾಪಸ್ ಆಗಿದ್ದಾರೆ. ಆಗ ತಂದೆ ಏನೋ ಕಾರಣ ಹೇಳಿ ಮತ್ತೆ ಶಾಲೆಗೆ ಕಳುಹಿಸಿದ್ದಾನೆ.
Advertisement
ನನ್ನ ಮಗಳು ರೂಮಿನಲ್ಲಿ ಮಲಗಿಕೊಂಡು ವಿಶ್ರಾಂತಿ ಪಡೆಯುತ್ತಿದ್ದಳು. ಆ ರೂಮಿಗೆ ಹೋಗಿ ಲಾಕ್ ಮಾಡಿಕೊಂಡು ಅತ್ಯಾಚಾರ ಎಸಗಿದ್ದಾನೆ. ನನ್ನ ಮಗಳು ಹೆದರಿಕೊಂಡು ಕೂಗಾಡಿದ್ದಾಳೆ. ಆಗ ಆರೋಪಿ ತಪ್ಪಿಸಿಕೊಂಡಿದ್ದಾನೆ. ನಾನು ಸಂಜೆ ಕೆಲಸ ಮುಗಿಸಿ ಮನೆಗೆ ಹಿಂದಿರುಗಿದಾಗ ನನ್ನ ಮಗಳು ಅಳುತ್ತಿದ್ದಳು. ನಂತರ ನಡೆದ ಘಟನೆಯ ಬಗ್ಗೆ ವಿವರಿಸಿದಳು ಎಂದು ತಾಯಿ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Advertisement
ಸಂತ್ರಸ್ತೆಯ ತಾಯಿ ದೂರಿನ ಆಧಾರದ ಮೇರೆಗೆ ಭಾನುವಾರ ಆರೋಪಿಯನ್ನು ಬಂಧಿಸಲಾಗಿದೆ. ಈ ಕುರಿತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸದ್ಯಕ್ಕೆ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಮಹಿಳಾ ಪೊಲೀಸ್ ಠಾಣಾಧಿಕಾರಿ ಕಾಂತಾ ದೇವಿ ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv