ಮೈಸೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿಗೆ ಮನೆಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅನುಚಿತವಾಗಿ ವರ್ತಿಸಿ ಬೆದರಿಕೆಯೊಡ್ಡಿದ ಘಟನೆ ಮೈಸೂರು (Mysuru) ಜಿಲ್ಲೆಯಲ್ಲಿ ನಡೆದಿದ್ದು, ಆರೋಪಿ ವಿರುದ್ಧ ಪೊಲೀಸರು ಎಫ್‌ಐಆರ್ (FIR) ದಾಖಲಿಸಿಕೊಂಡಿದ್ದಾರೆ.
ನಂಜನಗೂಡು(Nanjanagudu) ತಾಲೂಕಿನ ಮುಳ್ಳೂರು ಗ್ರಾಮದ ಮಹೇಂದ್ರ ಕುಮಾರ್ ಎಂಬ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯದಲ್ಲಿ ನಿರತರಾಗಿದ್ದ ಲತಾ ಎಂಬುವರು ನೀಡಿದ ದೂರಿನನ್ವಯ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಜುಲೈ 13ರ ರಾತ್ರಿ ಮದ್ಯಪಾನ ಮಾಡಿ ಲತಾ ಅವರ ಮನೆಗೆ ನುಗ್ಗಿದ ಮಹೇಂದ್ರ ಕುಮಾರ್, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. “ಗ್ರಾಮದ 300 ಜನರ ಮತಗಳನ್ನು ಹಾಳು ಮಾಡಿದ್ದೀಯಾ ಎಂದು ಸುಳ್ಳು ಆರೋಪ ಹೊರಿಸಿ, ಆಕೆಯ ಕೈ ಹಿಡಿದು ಎಳೆದಾಡಿ ಅನುಚಿತವಾಗಿ ವರ್ತಿಸಿದ್ದಾನೆ. ಇದನ್ನೂ ಓದಿ: ಮನೆಗೆ ನುಗ್ಗಿ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ – ಆರೋಪಿ ಅರೆಸ್ಟ್
ದೂರಿನಲ್ಲಿ ಇನ್ಮುಂದೆ ನಮ್ಮ ಗ್ರಾಮದಲ್ಲಿ ನೀನು ಹೇಗೆ ಕೆಲಸ ಮಾಡುತ್ತೀಯಾ ನೋಡುತ್ತೇನೆ, ನಿನ್ನನ್ನು ಕೆಲಸದಿಂದ ತೆಗೆಸಿಹಾಕುತ್ತೇನೆ ಎಂದು ಜೀವ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ನಂಜನಗೂಡು ತಾಲೂಕಿನ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ ಆರೋಪದಡಿ ಪ್ರಕರಣ ದಾಖಲಾಗಿದೆ.
