ಹೈದರಾಬಾದ್: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಕೆಲಸದ ಮೇಲಿರುವ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗೆ ಮುತ್ತು ಕೊಟ್ಟಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ.
ನಗರದಲ್ಲಿ ವಾರ್ಷಿಕ ಹಿಂದೂ ಹಬ್ಬದ ಆಚರಣೆ ವೇಳೆ ಈ ಘಟನೆ ನಡೆದಿದ್ದು, ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಕಿಸ್ ಮಾಡಿದ್ದರಿಂದ ಸಬ್ ಇನ್ಸ್‌ಪೆಕ್ಟರ್ ಕೋಪಗೊಂಡಿದ್ದಾರೆ. ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
A youth in Hyderabad booked for disturbing a cop from doing duty. A viral video shown youth kissing the copy forcibly even as he resisted. pic.twitter.com/YPn9e88PlF
— CharanTeja (@CharanT16) July 30, 2019
Advertisement
ಹೈದರಾಬಾದ್‍ನಲ್ಲಿ ಬೊನಾಲು ಹಬ್ಬವನ್ನು ಆಚರಿಸಲಾಗುತ್ತಿತ್ತು. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆಗಾಗಿ ಪೊಲೀಸರನ್ನು ನೇಮಿಸಲಾಗಿತ್ತು. ಹಬ್ಬದ ನಿಮಿತ್ತ ಮೆರವಣಿಗೆ ನಡೆಸುತ್ತಿದ್ದ ವೇಳೆ ಭದ್ರತಾ ಕಾರ್ಯದಲ್ಲಿ ತೊಡಗಿಕೊಂಡಿದ್ದೆವು. ಮೆರವಣಿಗೆ ಜೊತೆ ತೆರಳುತ್ತಿದ್ದಾಗ ನನಗೆ ಭಾನು ಎಂಬ ವ್ಯಕ್ತಿ ಕುಡಿದ ಅಮಲಿನಲ್ಲಿ ಮುತ್ತು ಕೊಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಮಹೇಂದ್ರ ಅವರು ವಿವರಿಸಿದ್ದಾರೆ.
Advertisement
ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದೇವೆ. ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ನಿರ್ಧರಿಸಲಾಗಿದೆ ಎಂದು ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.