ನವದೆಹಲಿ: ನ್ಯೂಯಾರ್ಕ್‍ನಿಂದ (New York) ನವದೆಹಲಿಗೆ (Delhi) ಸಂಚರಿಸುತ್ತಿದ್ದ ಏರ್ ಇಂಡಿಯಾ (Air India) ವಿಮಾನದಲ್ಲಿ (Flight) ಮಹಿಳೆಯೊಬ್ಬರ ಮೇಲೆ ಸಹಪ್ರಯಾಣಿಕ ಕಂಠಪೂರ್ತಿ ಕುಡಿದು ಮೂತ್ರ ವಿಸರ್ಜಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
Advertisement
ನ್ಯೂಯಾರ್ಕ್‍ನಿಂದ ದೆಹಲಿಗೆ ನ.26 ರಂದು ಏರ್ ಇಂಡಿಯಾ ವಿಮಾನ AI-102 ಸಂಚರಿಸುತ್ತಿತ್ತು. ಈ ವಿಮಾನದಲ್ಲಿ ಬ್ಯುಸಿನೆಸ್ ಕ್ಲಾಸ್‍ನಲ್ಲಿ ಸಂಚರಿಸುತ್ತಿದ್ದ ಪುರುಷ ಪ್ರಯಾಣಿಕರೊಬ್ಬರು ಕುಡಿದ ಮತ್ತಿನಲ್ಲಿ (Drunk Man) ಸಹಪ್ರಯಾಣಿಕರಾಗಿದ್ದ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ್ದಾರೆ. ಈ ಬಗ್ಗೆ ಮಹಿಳೆ ಕೂಡಲೇ ಏರ್ ಇಂಡಿಯಾ ವಿಮಾನದಲ್ಲಿದ್ದ ಸಿಬ್ಬಂದಿಗೆ ತಿಳಿಸಿದ್ದಾರೆ. ಸಿಬ್ಬಂದಿ ಬಂದು ವಿಚಾರಿಸುತ್ತಿದ್ದಂತೆ ಕುಡಿದ ಮತ್ತಿನಲ್ಲಿ ಏನು ಅರಿಯದವರಂತೆ ವರ್ತಿಸಿದ್ದಾರೆ. ಇದನ್ನೂ ಓದಿ: ಹತ್ಯೆ ಕೇಸ್- ಅಮಾನತುಗೊಂಡ ಬಿಜೆಪಿ ನಾಯಕನ ಅಕ್ರಮ ಹೋಟೆಲ್ ನೆಲಸಮ
Advertisement
Advertisement
ಘಟನೆ ಬಳಿಕ ಮಹಿಳೆ ಈ ಬಗ್ಗೆ ಟಾಟಾ ಸನ್ಸ್ ಗ್ರೂಪ್‌ನ (Tata Group) ಮುಖ್ಯಸ್ಥ ನಟರಾಜನ್ ಚಂದ್ರಶೇಖರನ್ ಅವರಿಗೆ ಪತ್ರ ಬರೆದು ಘಟನೆ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ವಿಮಾನದ ಸಿಬ್ಬಂದಿ ಘಟನೆಯ ಬಳಿಕ ಈ ಬಗ್ಗೆ ಯಾವುದೇ ರೀತಿಯ ರೆಸ್ಪಾನ್ಸ್ ಮಾಡಿಲ್ಲ. ಇದರಿಂದ ವಿಮಾನದಲ್ಲಿ ಸಂಚರಿಸುವಾಗ ನಮ್ಮ ಸುರಕ್ಷತೆ ಬಗ್ಗೆ ಪ್ರಶ್ನೆ ಮಾಡುವಂತಾಗಿದೆ. ಇದನ್ನೂ ಓದಿ: ತ್ರಿಪುರಾದ ಮಾಜಿ ಸಿಎಂ ಪೂರ್ವಜರ ಮನೆಗೆ ಬೆಂಕಿಯಿಟ್ಟ ದುಷ್ಕರ್ಮಿಗಳು
Advertisement
ಊಟದ ಬಳಿಕ ವಿಮಾನದ ಲೈಟ್ ಆಫ್ ಮಾಡಲಾಗಿತ್ತು. ಈ ವೇಳೆ ಪ್ರಯಾಣಿಕರೊಬ್ಬರು ನನ್ನ ಸೀಟ್ ಬಳಿ ಬಂದು ಮೂತ್ರ ವಿಸರ್ಜಿಸಿದ್ದಾರೆ. ಈ ವೇಳೆ ಅವರ ಖಾಸಗಿ ಅಂಗವನ್ನು ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಏರ್ ಇಂಡಿಯಾ ಘಟನೆ ಬಗ್ಗೆ ಇದೀಗ ಮಾಹಿತಿ ಸಿಕ್ಕಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಅಸಭ್ಯವಾಗಿ ವರ್ತಿಸಿದ ಪ್ರಯಾಣಿಕರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಸ್ಪಷ್ಟಪಡಿಸಿದೆ.