ನವದೆಹಲಿ: ಕೆಲ ದಿನಗಳ ಹಿಂದೆ ಏರ್ ಇಂಡಿಯಾ ವಿಮಾನದಲ್ಲಿ (Air India Flight) ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಮೂತ್ರವಿಸರ್ಜನೆ (Peeing) ಮಾಡಿರುವ ಘಟನೆ ಬೆಳಕಿಗೆ ಬಂದಿರುವ ಬಳಿಕ ಇಂತಹುದೇ ಇನ್ನೊಂದು ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ದೆಹಲಿಯ ವಿಮಾನ ನಿಲ್ದಾಣದಲ್ಲಿ (Delhi Airport) ಕುಡಿದ ನಶೆಯಲ್ಲಿ ಬಹಿರಂಗವಾಗಿ ಮೂತ್ರವಿಸರ್ಜನೆ ಮಾಡಿದ್ದಾನೆ.
ಜನವರಿ ೮ರಂದು ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ಸಾರ್ವಜನಿಕವಾಗಿ ವ್ಯಕ್ತಿಯೊಬ್ಬ ಮೂತ್ರವಿಸರ್ಜನೆ ಮಾಡಿರುವುದಾಗಿ ವರದಿಯಾಗಿದೆ. ನಿಲ್ದಾಣದ ನಿರ್ಗಮನ ಗೇಟ್ನಲ್ಲಿ ಮೂತ್ರವಿಸರ್ಜನೆ ಮಾಡಿದ್ದಕ್ಕೆ ಪೊಲೀಸರು ಬಿಹಾರ ಮೂಲದ ಜೌಹರ್ ಅಲಿ ಖಾನ್ನನ್ನು ಬಂಧಿಸಿದ್ದರು. ಬಳಿಕ ಆತ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ.
Advertisement
Advertisement
ವ್ಯಕ್ತಿ ದೆಹಲಿಯಿಂದ ಸೌದಿ ಅರೇಬಿಯಾದ ದಮಾಮ್ಗೆ ವಿಮಾನದಲ್ಲಿ ಪ್ರಯಾಣಿಸಬೇಕಿತ್ತು. ಆತ ವಿಮಾನ ನಿಲ್ದಾಣಕ್ಕೆ ಮದ್ಯಪಾನ ಮಾಡಿ ಬಂದಿದ್ದು, ನಶೆಯಲ್ಲಿ ಈ ರೀತಿಯ ಕೃತ್ಯ ಮಾಡಿದ್ದಾನೆ. ಇದಲ್ಲದೇ ಆತ ಸುತ್ತಮುತ್ತಲಿನ ಇತರ ಪ್ರಯಾಣಿಕರಿಗೂ ನಿಂದಿಸಿ ತೊಂದರೆ ಕೊಟ್ಟಿದ್ದಾನೆ ಎಂದು ವರದಿಯಾಗಿದೆ. ಇದನ್ನೂ ಓದಿ: ಜೋಶಿಮಠ ಮುಳುಗಡೆ – ಪ್ರತಿ ಸಂತ್ರಸ್ತ ಕುಟುಂಬಕ್ಕೆ 1.5 ಲಕ್ಷ ಪರಿಹಾರ
Advertisement
Advertisement
ಘಟನೆ ಬಗ್ಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ನೀಡಿದ ದೂರಿನ ಆಧಾರದ ಮೇಲೆ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪೊಲೀಸರು ಭಾರತೀಯ ದಂಡಸಂಹಿತೆ (IPC) ಸೆಕ್ಷನ್ 294 ಹಾಗೂ 510ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವ್ಯಕ್ತಿಯನ್ನು ಬಂಧನ ಮಾಡಿದ ಬಳಿಕ ಆತನನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ. ಇದನ್ನೂ ಓದಿ: ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ಉತ್ಪಾದನೆ, ಮಾರಾಟಕ್ಕೆ ಬಾಂಬೆ ಹೈಕೋರ್ಟ್ ಅನುಮತಿ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k