ರಾಂಚಿ: ವ್ಯಕ್ತಿಯೊಬ್ಬ ಕುಡಿದ ಮತ್ತಲ್ಲಿ ತನ್ನ ತಾಯಿಯನ್ನೇ ಥಳಿಸಿ ಹತ್ಯೆ ಮಾಡಿದ ಘಟನೆ ಜಾರ್ಖಂಡ್‍ನ ಗುಮ್ಲಾ ಜಿಲ್ಲೆಯಲ್ಲಿ ನಡೆದಿದೆ.
ಜಾರ್ಖಂಡ್‍ನ ಗುಮ್ಲಾ ಜಿಲ್ಲೆಯ ಸಾರೆದ್ ಗ್ರಾಮದಲ್ಲಿ ಮನೋಜ್ ಚೀಕ್ ಬಡೈಕ್ (28) ಎಂಬಾತ ಕುಡಿದು ಮನೆಗೆ ಬಂದು ತನ್ನ ತಾಯಿ ಮನ್ಮೈತ್ ದೇವಿ(60)ಯನ್ನು ಥಳಿಸಲು ಪ್ರಾರಂಭಿಸಿದ್ದಾನೆ. ಇದರ ಪರಿಣಾಮವಾಗಿ ಆಕೆ ಸ್ಥಳದಲ್ಲೇ ಮೃತಪಟ್ಟದ್ದಾಳೆ. ಇದಾದ ಬಳಿಕ ಮನೋಜ್ ತನ್ನ ತಾಯಿ ಸಾವನ್ನಪ್ಪಿರುವುದನ್ನು ಗಮನಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಇದನ್ನೂ ಓದಿ: 20ಕ್ಕೂ ಹೆಚ್ಚು ಎಮ್ಮೆ, ಹಸುಗಳ ಮೇಲೆ ಆ್ಯಸಿಡ್ ಎರಚಿದ ಕಿಡಿಗೇಡಿಗಳು!
- Advertisement 2-
- Advertisement 3-
ಗ್ರಾಮಸ್ಥರು ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಘಟನೆಗೆ ಸಂಬಂಧಿಸಿ ಘಾಘ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪೊಲೀಸ್ ಠಾಣಾಧಿಕಾರಿ ಮಾತನಾಡಿ, ದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ಈ ಕುರಿತು ವಿವಿಧ ಆಯಾಮಾದಲ್ಲಿ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದು, ತಲೆಮರೆಸಿಕೊಂಡಿರುವ ಆರೋಪಿ ಮನೋಜ್‍ಗಾಗಿ ಪೊಲೀಸರು ಹುಡಕಾಡುತ್ತಿದ್ದಾರೆ. ಇದನ್ನೂ ಓದಿ: ಬಿಹಾರ ಸ್ಪೀಕರ್ ಸ್ಥಾನಕ್ಕೆ ವಿಜಯ್ ಕುಮಾರ್ ಸಿನ್ಹಾ ರಾಜೀನಾಮೆ