ದಾವಣಗೆರೆ: ಕಂಠಪೂರ್ತಿ ಕುಡಿದು ಪ್ರತಿಷ್ಠಿತ ಕುಟುಂಬಕ್ಕೆ ಸೇರಿದ ಯುವತಿಯೊಬ್ಬಳು ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ ಘಟನೆ ದಾವಣಗೆರೆ (Davanagere) ನಗರದ ಶಾಮನೂರು ರಸ್ತೆಯಲ್ಲಿ ನಡೆದಿದೆ.
ಓವರ್ ಡ್ರಿಂಕ್ ಮಾಡಿ ಯುವತಿ ಥಾರ್ ಕಾರನ್ನು ಅಡ್ಡಾದಿಡ್ಡಿ ಚಲಾಯಿಸುತ್ತಿದ್ದಳು. ಈ ವೇಳೆ ಡ್ರಿಂಕ್ & ಡ್ರೈವ್ (Drunk And Drive) ತಪಾಸಣೆ ಮಾಡುತ್ತಿದ್ದ ಪೊಲೀಸರು, ಕಾರನ್ನು ತಡೆದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಯುವತಿ, ಮಹಿಳಾ ಪಿಎಸ್‌ಐಗೆ ಕಾಲಿನಿಂದ ಒದ್ದು, ಹಲ್ಲೆ ಮಾಡಿದ್ದಾಳೆ. ಇದನ್ನೂ ಓದಿ: ಗೋವಾ ಬೀಚ್‌ನಲ್ಲಿ ಕೊಚ್ಚಿ ಹೋದ ಕನ್ನಡಿಗ – ಬಂಡೆ ಮೇಲೆ ಕುಳಿತಿದ್ದಾಗ ಅಲೆಗಳ ರಭಸಕ್ಕೆ ಮುಳುಗಿ ಸಾವು
ಯುವತಿ ರಂಪಾಟ ಮಾಡಿದ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಆಕೆಯ ವಿರುದ್ಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಮ ಮಂದಿರ ದೇಣಿಗೆ ಕಳ್ಳತನ ವಿವಾದ – SIT ವರದಿ ಬಳಿಕ 8 ಮಂದಿ ವಿರುದ್ಧ ಎಫ್‌ಐಆರ್, ಇಬ್ಬರು ಅರೆಸ್ಟ್
