ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ಇಬ್ಬರು ಯುವಕರು ಟ್ರಾಫಿಕ್ ಪೊಲೀಸರ (Traffic Police) ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ (Hubballi) ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ನಡೆದಿದೆ.
ವಾಹನ ತಪಾಸಣೆ ವೇಳೆ ಇಬ್ಬರು ಯುವಕರನ್ನು ಟ್ರಾಫಿಕ್ ಪೊಲೀಸರು ತಡೆದಿದ್ದರು. ಈ ವೇಳೆ ಮದ್ಯಪಾನ ಮಾಡಿರುವ ಬಗ್ಗೆ ಪ್ರಶ್ನಿಸಿದ್ದರು. ಇದರಿಂದ ಸಿಟ್ಟಿಗೆದ್ದ ಯುವಕರು ಪೊಲೀಸರ ಮೇಲೆ ದರ್ಪ ತೋರಿದ್ದಾರೆ. ಮೈಕೈ ಮುಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಮುಂದಾಗಿದ್ದಾರೆ. ಇದನ್ನೂ ಓದಿ: ಬಾದಾಮಿ ಅಗಸ್ತ್ಯ ಹೊಂಡದಲ್ಲಿ ಈಜಲು ಹೋದ ಯುವಕ ನಾಪತ್ತೆ
ಯುವಕರ ವರ್ತನೆ ಸಾರ್ವಜನಿಕರು ತಮ್ಮ ಮೊಬೈಲ್‍ನಲ್ಲಿ ಸೆರೆಯಾಗಿದೆ. ಹಲ್ಲೆಗೆ ಯತ್ನಿಸಿದವರು ಹುಬ್ಬಳ್ಳಿ ಗಾಂಧೀವಾಡಾ ನಿವಾಸಿಗಳೆಂದು ಮಾಹಿತಿ ಲಭ್ಯವಾಗಿದೆ. ಪುಂಡ ಯುವಕರ ವರ್ತನೆಗೆ ಸಾರ್ವಜನಿಕರು ಸಹ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಕೊಯಮತ್ತೂರಲ್ಲಿ 10 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಕೊಲೆ – ಸಿಎಂ ವಿಜಯ್ ಸರ್ಕಾರದ ವಿರುದ್ಧ ಡಿಎಂಕೆ ಕಿಡಿ
