– ದುಬೈನಲ್ಲಿರೋ ಮೃತ ಮಹಿಳೆ ಪತಿಗಾಗಿ ಪೊಲೀಸರ ಶೋಧ
ಲಕ್ನೋ: ತನ್ನ 5 ಜನ ಸಹೋದರರಿಗೆ ಹಣ ನೀಡಿ ಪತ್ನಿಯನ್ನೇ (Wife) ಪತಿ (Husband) ಕೊಲೆ ಮಾಡಿಸಿರುವ ಘಟನೆ ಫತೇಪುರ್‌ನಲ್ಲಿ (Fatehpur) ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ (Uttar Pradesh) ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
Advertisement
ಆರೋಪಿಗಳನ್ನು ರೋಹಿತ್ ಲೋಧಿ, ರಾಮಚಂದ್ರ ಆಲಿಯಾಸ್ ಪುಟ್ಟು, ಶಿವಂ ಅಲಿಯಾಸ್ ಪಂಚಮ್, ಸೋನು ಲೋಧಿ ಎಂದು ಗುರುತಿಸಲಾಗಿದೆ. ಐದನೇ ಆರೋಪಿಯಾದ ನೊಂಕು ಲೋಧಿ ಪರಾರಿಯಾಗಿದ್ದಾನೆ. ಸಂತ್ರಸ್ತೆಯ ಗಂಡ ದುಬೈನಲ್ಲಿದ್ದಾನೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ರೀಲ್ಸ್ ಮಾಡ್ತಾ ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟೀವ್ ಆಗಿದ್ದ ಶಿಕ್ಷಕಿ – ಸಾವಿನ ಸುತ್ತ ಅನುಮಾನಗಳ ಹುತ್ತ!
Advertisement
Advertisement
ಏನಿದು ಪ್ರಕರಣ?
ತವರು ಮನೆಗೆ ಹೋಗಿದ್ದ ಆತ್ತಿಗೆಯನ್ನು ಜಾತ್ರೆಗೆ ಕರೆದುಕೊಂಡು ಹೋಗುತ್ತೇವೆ ಎಂದು ಹೇಳಿ ಆಕೆಯನ್ನು ನಂಬಿಸಿ ಮೈದುನರು ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಆಕೆಯ ಮೇಲೆ ಐದು ಜನ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ನಂತರ ಆಕೆಯ ಗುರುತನ್ನು ಮರೆಮಾಚಲು ಮುಖಕ್ಕೆ ಇಟ್ಟಿಗೆಗಳಿಂದ ಹೊಡೆದು ಹಲ್ಲೆ ಮಾಡಿದ್ದಾರೆ. ಇದನ್ನೂ ಓದಿ : ವೇದಿಕೆಯಲ್ಲೇ ಕುಸಿದು ಬಿದ್ದು ಹನುಮ ವೇಷಧಾರಿ ನಿಧನ
Advertisement
ಹಲ್ಲೆ ಮಾಡಿದ ನಂತರ ಸಂತ್ರಸ್ತೆಯ ಮೃತದೇಹವನ್ನು ಬೆತ್ತಲೆಯಾಗಿಯೇ ಫತೇಪುರ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದರ ನೀರಿನ ಟ್ಯಾಂಕ್‌ನಲ್ಲಿ ಬಿಸಾಡಿ ಹೋಗಿದ್ದರು. ಗ್ರಾಮಸ್ಥರು ಮೃತದೇಹವನ್ನು ಕಂಡು ಈ ಕುರಿತು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಸಂತ್ರಸ್ತೆಯ ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಜೊತೆಗೆ ಸ್ಥಳದಲ್ಲಿ ಆರೋಪಿಗಳು ಕುಡಿದು ಬಿಸಾಡಿದ ಮದ್ಯದ ಬಾಟಲಿ ಮತ್ತು ತಿನಿಸುಗಳು ದೊರಕಿವೆ. ಇದನ್ನೂ ಓದಿ: ರನ್‌ವೇನಲ್ಲಿ ಸ್ಕಿಡ್ ಆದ ಮ್ಯಾನ್ಮಾರ್ ಮಿಲಿಟರಿ ವಿಮಾನ- 6 ಮಂದಿಗೆ ಗಾಯ
ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆರೋಪಿಗಳು ಕೊಲೆ ಬಗ್ಗೆ ಬಾಯಿಬಿಟ್ಟಿದ್ದು, ಸಂತ್ರಸ್ತೆಯ ಪತಿಯೇ ಇದಕ್ಕೆ ಸಾಥ್ ನೀಡಿರುವುದಾಗಿ ಬೆಳಕಿಗೆ ಬಂದಿದೆ. ತವರು ಮನೆಗೆ ಹೋಗಿದ್ದ ಪತ್ನಿಯನ್ನು ಕೊಲೆ ಮಾಡಿದರೆ ಹಣ ನೀಡುವುದಾಗಿ ಸಂತ್ರಸ್ತೆಯ ಪತಿ, ಅವನ ಐದು ಮಂದಿ ಸಹೋದರಿಗೆ ಹಣದ ಆಸೆ ತೋರಿಸಿದ್ದ. ಹಣದ ಮೋಹಕ್ಕೆ ಒಳಗಾದ ಸಹೋದರರು ಅತ್ತಿಗೆಯನ್ನೇ ಕೊಲೆ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆಯ ಪತಿ ದುಬೈನಲ್ಲಿದ್ದಾನೆ. ಐದನೇ ಆರೋಪಿಗಾಗಿ ಹುಡುಕಾಟ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ʻಜೈ ಶ್ರೀರಾಮ್ʼ ಘೋಷಣೆ ಕೂಗುತ್ತಿದ್ದ ಯುವಕರ ಗುಂಪಿನ ಮೇಲೆ ಕಲ್ಲು ತೂರಾಟ
ಮರಣೋತ್ತರ ಪರೀಕ್ಷೆಯಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದು, ತಲೆಗೆ ಪೆಟ್ಟು ಬಿದ್ದ ಕಾರಣ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾಳೆ ಎಂದು ವೈದ್ಯರು ದೃಢೀಕರಿಸಿದ್ದಾರೆ. ಇದನ್ನೂ ಓದಿ: 11 ದಿನಗಳ ಕಾಲ ಮೋದಿ ಉಪವಾಸ ಮಾಡಿದ್ದೇ ಅನುಮಾನ: ವೀರಪ್ಪ ಮೊಯ್ಲಿ