ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಬೆಂಗಳೂರಿಗೆ (Bengaluru) ಬಂದಿಳಿಯಬೇಕಿದ್ದ ವಿಮಾನಗಳನ್ನು (Flight) ಬೇರೆಡೆಗೆ ಕಳುಹಿಸಲಾಗಿದೆ.
ದೇವನಹಳ್ಳಿ ಹಾಗೂ ಕೇಂಪೇಗೌಡ ವಿಮಾನ ನಿಲ್ದಾಣ ಭಾಗದಲ್ಲಿ ಧಾರಕಾರ ಮಳೆಯಾಗುತ್ತಿರುವ ಹಿನ್ನೆಲೆ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ 10ಕ್ಕೂ ಹೆಚ್ಚು ವಿಮಾನಗಳನ್ನು ಚೆನ್ನೈ, ಕೊಯಂಬತ್ತೂರು ಹಾಗೂ ಹೈದರಾಬಾದ್ ವಿಮಾನ ನಿಲ್ದಾಣಗಳತ್ತ ಡೈವರ್ಟ್ ಮಾಡಲಾಗಿದೆ. ಇದನ್ನೂ ಓದಿ: ಕ್ರ್ಯಾಶ್ ಟೆಸ್ಟ್‌ನಲ್ಲಿ 5 ಸ್ಟಾರ್ ಪಡೆದ ಫೋಕ್ಸ್‌ವ್ಯಾಗನ್ ವರ್ಟಸ್, ಸ್ಕೋಡಾ ಸ್ಲಾವಿಯಾ
Advertisement
Advertisement
ಬೇರೆಡೆಗೆ ಕಳುಹಿಸಲಾಗಿರುವ ವಿಮಾನಗಳಲ್ಲಿ ದೆಹಲಿ, ಮುಂಬೈ ಸೇರಿದಂತೆ ಇತರ ಭಾಗಗಳಿಂದ ಆಗಮಿಸುತ್ತಿದ್ದ ವಿಮಾನಗಳು ಸೇರಿವೆ. 10ಕ್ಕೂ ಹೆಚ್ಚು ವಿಮಾನಗಳನ್ನು ಬೇರೆ ವಿಮಾನ ನಿಲ್ದಾಣಗಳಿಗೆ ಕಳುಹಿಸಲಾಗಿದೆ.
Advertisement
ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ 4-6 ಸೆಂ.ಮೀ ತೀವ್ರ ಮಳೆಯಾಗಿದೆ. ಮಾತ್ರವಲ್ಲದೇ ಗಂಟೆಗೆ 20 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಇದು ವಿಮಾನಗ ಲ್ಯಾಂಡಿಂಗ್ ಮಾಡಲು ಅಡ್ಡಿಯಾಗಿದೆ. ಇದೀಗ ಮುಂಜಾಗೃತಾ ಕ್ರಮವಾಗಿ ವಿಮಾನಗಳನ್ನು ಬೇರೆಡೆಗೆ ಕಳುಹಿಸಲಾಗಿದೆ. ಇದನ್ನೂ ಓದಿ: ಜಿಯೋ ಸಿನಿಮಾದಲ್ಲಿ ದಾಖಲೆ ಬರೆದ ಧೋನಿಯ ಅವಳಿ ಸಿಕ್ಸರ್