ನವದೆಹಲಿ: ಚಳಿಗಾಲ ಆರಂಭವಾಗುತ್ತಿದ್ದಂತೆಯೇ ರಾಷ್ಟ್ರ ರಾಜಧಾನಿ ದೆಹಲಿ (Delhi) ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಮಂಜಿನ ಹೊದಿಕೆ, ಗ್ಯಾಸ್ ಚೇಂಬರ್ ಆಗಿ ಬದಲಾಗಿವೆ. ಉಸಿರಾಡಲು ಶುದ್ಧ ಗಾಳಿ, ಉತ್ತಮ ವಾತಾವರಣ ಇಲ್ಲದೇ ಜನಸಾಮಾನ್ಯರು ಪರದಾಡುವ ಪರಿಸ್ಥಿತಿ ಮತ್ತೆ ಮರುಕಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಶಾಲೆಯಿಂದ ವಿನಾಯಿತಿ ನೀಡಲಾಗಿದೆ.
Due to rising pollution levels, all primary schools in Delhi will be shifting to online classes, until further directions.
— Atishi (@AtishiAAP) November 14, 2024
Advertisement
ಈ ಕುರಿತು ದೆಹಲಿ ಸಿಎಂ ಅತಿಶಿ (Atishi) ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ವಾಯು ಮಾಲಿನ್ಯ ಮಿತಿಮೀರಿದ ಹಿನ್ನೆಲೆಯುಲ್ಲಿ ದೆಹಲಿಯ ಎಲ್ಲಾ ಪ್ರಾಥಮಿಕ ಶಾಲೆಗಳು ಮುಂದಿನ ಆದೇಶದ ವರೆಗೆ ಆನ್‌ಲೈನ್ ತರಗತಿಗಳಿಗೆ ಬಲಾಗುವಂತೆ ಆದೇಶಿಸಿದ್ದಾರೆ.
Advertisement
ಗುರುವಾರ (ನ.14) ಬೆಳಿಗ್ಗೆ ದಟ್ಟನೆಯ ಮಂಜು ಆವರಿಸಿದ್ದನ್ನು ಕಂಡು ದಿಲ್ಲಿಗರು ಕಂಗಾಲಾಗಿದ್ದಾರೆ. ವಾಯು ಗುಣಮಟ್ಟ ಸೂಚ್ಯಂಕದಲ್ಲಿ (AIQ) ಮಟ್ಟ ಅಪಾಯಕಾರಿ ಹಂತದತ್ತ ತಲುಪುತ್ತಿದೆ. ಮುಂಜಾನೆ AQI 452ರ ಗಡಿ ದಾಟಿದೆ. ಇದರಿಂದ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Delhi Airport) ಗೋಚರತೆ ಕಡಿಮೆಯಾಗಿದ್ದು, 300 ಅಧಿಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಫ್ಲೈಟ್‌ರಾಡಾರ್ ತಿಳಿಸಿದೆ.
Advertisement
#WATCH | Delhi: A thick layer of smog engulfs the Gazipur as the air quality deteriorates to ‘Severe’ category in several parts of the national capital, as per Central Pollution Control Board (CPCB).
AQI in Anand Vihar is at 473 pic.twitter.com/QuiRz7LAtv
— ANI (@ANI) November 14, 2024
Advertisement
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಪ್ರಕಾರ, ರಾಜಧಾನಿ ಭಾಗದ ಹಲವು ಪ್ರದೇಶಗಳಲ್ಲಿ ಎಕ್ಯೂಐ ಪ್ರಮಾಣ 450 ದಾಟಿದೆ. ಆನಂದ ವಿಹಾರ್, ಅಶೋಕ್ ವಿಹಾರ್, ಬವಾನಾ, ದ್ವಾರಕಾ, ಜಹಾಂಗೀರ್‌ಪುರಿ, ಮುಂಡ್ಕ, ನಜಾಫ್‌ಗಡ, ಲಾಜ್‌ಪತ್ ನಗರ್, ಪತ್ಪರ್‌ಗಂಜ್, ಪಂಜಾಬಿ ಬಾಗ್, ಆರ್‌ಕೆ ಪುರಂ, ರೋಹಿಣಿ, ವಿವೇಕ್ ವಿಹಾರ್ ಮತ್ತು ವಾಜಿರ್‌ಪುರ ಪ್ರದೇಶಗಳನ್ನು ಎಕ್ಯೂಐ ಸರಾಸರಿ ‘ತೀವ್ರ’ ಸ್ವರೂಪದ ವರ್ಗದಲ್ಲಿ ಗುರುತಿಸಲಾಗಿದ್ದು, ಬೆಳಿಗ್ಗೆ 6 ಗಂಟೆ ಸುಮಾರಿಗೆ 450ಕ್ಕಿಂತ ಅಧಿಕವಿತ್ತು.
ಹದಗೆಡುತ್ತಿರುವ ಗಾಳಿಯ ಗುಣಮಟ್ಟದ ಕುರಿತು ಮಾತನಾಡಿದ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರು ಅತಿಶಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು, ನಾವು ಕರ್ತವ್ಯ ಪಥದಲ್ಲಿ ನಿಂತಿದ್ದೇವೆ ಇಲ್ಲಿ AQI 474 ತಲುಪಿದೆ. ನಮಗೆ ಇಂಡಿಯಾ ಗೇಟ್ ಅನ್ನು ಸಹ ನೋಡಲಾಗುತ್ತಿಲ್ಲ, ಎಎಪಿ ಸರ್ಕಾರದ ಅಸಮರ್ಥತೆ ಇದಕ್ಕೆ ಕಾರಣ ಎಂದು ವಾಗ್ದಾಳಿ ನಡೆಸಿದರು.