ಅಹಮದಾಬಾದ್: ಭದ್ರತಾ ಕಾರಣಗಳಿಂದಾಗಿ (Security Reasons) ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡ ತನ್ನ ಏಕೈಕ ಅಭ್ಯಾಸವನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ.
ಇಂದು ರಾಜಸ್ಥಾನ ರಾಯಲ್ಸ್ (Rajasthan Royals) ವಿರುದ್ಧ ನಡೆಯಲಿರುವ ಎಲಿಮಿನೇಟರ್ ಪಂದ್ಯಕ್ಕೆ ಮಂಗಳವಾರ ಆರ್‌ಸಿಬಿ (RCB) ಅಹಮಾದಾಬಾದ್‌ನಲ್ಲಿರುವ ಗುಜರಾತ್ ಕಾಲೇಜ್ ಅಂಗಳದಲ್ಲಿ ಅಭ್ಯಾಸ ನಡೆಸಬೇಕಿತ್ತು. ಆದರೆ ಯಾವುದೇ ಅಧಿಕೃತ ಕಾರಣ ನೀಡದೇ ಅಭ್ಯಾಸವನ್ನು ರದ್ದುಗೊಳಿಸಿತ್ತು. ಇನ್ನೊಂದು ಕಡೆ ರಾಜಸ್ಥಾನ್ ರಾಯಲ್ಸ್ ಅದೇ ಸ್ಥಳದಲ್ಲಿ ಅಭ್ಯಾಸ ನಡೆಸಿದೆ.
Advertisement
ವಿರಾಟ್ ಕೊಹ್ಲಿಗೆ (Virat Kohli) ಬೆದರಿಕೆ ಇದ್ದ ಕಾರಣ ಆರ್‌ಸಿಬಿ ಅಭ್ಯಾಸವನ್ನು ಮಂಗಳವಾರ ನಡೆಸಿಲ್ಲ ಎಂದು ಪೊಲೀಸ್ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ.
Advertisement
Advertisement
ಭಯೋತ್ಪಾದನಾ ಚಟುವಟಿಕೆಗಳ ಶಂಕೆಯ ಮೇಲೆ ಗುಜರಾತ್ ಪೊಲೀಸರು (Gujarat Police) ಸೋಮವಾರ ರಾತ್ರಿ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ (Ahmedabad Airport) ನಾಲ್ವರನ್ನು ಬಂಧಿಸಿದ್ದರು.
Advertisement
ನಾಲ್ವರು ಆರೋಪಿಗಳ ಅಡಗುತಾಣವನ್ನು ಶೋಧಿಸಿದ ನಂತರ ಪೊಲೀಸರು ಶಸ್ತ್ರಾಸ್ತ್ರಗಳ ವಶಪಪಡಿಸಿಕೊಂಡಿದ್ದಾರೆ. ಈ ವೇಳೆ ವೀಡಿಯೊಗಳು ಮತ್ತು ಪಠ್ಯ ಸಂದೇಶಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ವಿಚಾರವನ್ನು ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ತಿಳಿಸಲಾಗಿತ್ತು. ಅಹಮದಾಬಾದ್‌ಗೆ ವಿರಾಟ್ ಕೊಹ್ಲಿ ಬಂದ ನಂತರ ಈ ವಿಚಾರವನ್ನು ತಿಳಿಸಲಾಗಿದೆ. ವಿರಾಟ್ ಕೊಹ್ಲಿ ದೇಶದ ಸಂಪತ್ತು ಮತ್ತು ಅವರ ಭದ್ರತೆ ನಮ್ಮ ಅತ್ಯಂತ ಆದ್ಯತೆಯಾಗಿದೆ ಎಂದು ಪೊಲೀಸ್ ಅಧಿಕಾರಿ ವಿಜಯ್ ಸಿಂಗ್ ಜ್ವಾಲಾ ಹೇಳಿದರು.
ಆರ್‌ಸಿಬಿ ರಿಸ್ಕ್ ತೆಗೆದುಕೊಳ್ಳಲು ಬಯಸಲಿಲ್ಲ. ಯಾವುದೇ ಅಭ್ಯಾಸದ ಅವಧಿ ಇರುವುದಿಲ್ಲ ಎಂದು ಅವರು ನಮಗೆ ತಿಳಿಸಿದರು. ರಾಜಸ್ಥಾನ್ ರಾಯಲ್ಸ್‌ಗೆ ಈ ವಿಚಾರವನ್ನು ತಿಳಿಸಲಾಗಿತ್ತು. ಆದರೆ ಅವರು ಅಭ್ಯಾಸದಲ್ಲಿ ತೊಡಗಿಕೊಂಡರು ಎಂದು ಹೇಳಿದರು.
ಆರ್‌ಸಿಬಿ ಆಟಗಾರರು ತಂಗಿದ್ದ ಹೋಟೆಲಿನಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಆರ್‌ಸಿಬಿ ಆಟಗಾರರಿಗೆ ಹೋಟೆಲಿನಲ್ಲಿ ಪ್ರತ್ಯೇಕ ಪ್ರವೇಶ ದ್ವಾರವನ್ನು ಕಲ್ಪಿಸಲಾಗಿದೆ. ಐಪಿಎಲ್ (IPL) ಮಾಧ್ಯಮ ಪಾಸ್ ಹೊಂದಿರುವ ಪ್ರತಿನಿಧಿಗಳಿಗೂ ಹೋಟೆಲ್ ಆವರಣ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ರಾಜಸ್ಥಾನ ರಾಯಲ್ಸ್ ತಂಡ ಬಸ್ ಮೂಲಕ ಮೈದಾನ ಪ್ರವೇಶಿಸಿತ್ತು. ಅಭ್ಯಾಸಕ್ಕೆ ಬರುವಾಗ ಮತ್ತು ಅಭ್ಯಾಸದ ವೇಳೆ ಭದ್ರತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಮೈದಾನದ ಉದ್ದಕ್ಕೂ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಗಸ್ತು ತಿರುಗುತ್ತಿದ್ದರು. ಭದ್ರತಾ ಕಾರಣಕ್ಕೆ ರಾಜಸ್ಥಾನ ಮತ್ತು ಬೆಂಗಳೂರು ತಂಡಗಳು ಪಂದ್ಯಕ್ಕೆ ಮುನ್ನ ನಿಗದಿಯಾಗಿದ್ದ ಸುದ್ದಿಗೋಷ್ಠಿಯನ್ನು ರದ್ದು ಮಾಡಿದೆ ಎಂದು ವರದಿಯಾಗಿದೆ.
ನಾಲ್ವರು ಅರೆಸ್ಟ್:
ಇಸ್ಲಾಮಿಕ್ ಸ್ಟೇಟ್‌ನ (ಐಸಿಸ್) ನಾಲ್ವರು ಉಗ್ರರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ಪೊಲೀಸರು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಸೋಮವಾರ ಬಂಧಿಸಿದ್ದರು. ಈ ನಾಲ್ವರು ಶ್ರೀಲಂಕಾ ಪ್ರಜೆಗಳಾಗಿದ್ದು ಮೊದಲು ಚೆನ್ನೈಗೆ ಆಗಮಿಸಿ ನಂತರ ಅಹಮದಾಬಾದ್‌ನಲ್ಲಿ ಲ್ಯಾಂಡ್ ಆಗಿದ್ದರು.
ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಪಾಕಿಸ್ತಾನದ ಹ್ಯಾಂಡ್ಲರ್‌ಗಳಿಂದ ಸಂದೇಶಕ್ಕಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ಅರೆಸ್ಟ್ ಆಗಿದ್ದಾರೆ. ಬಂಧಿತರನ್ನು ಮೊಹಮದ್ ನುಸ್ರತ್, ಮೊಹಮದ್ ನಫ್ರಾನ್, ಮೊಹಮದ್ ಫಾರಿಸ್ ಮತ್ತು ಮೊಹಮದ್ ರಸ್ದೀನ್ ಎಂದು ಗುರುತಿಸಲಾಗಿದೆ.