ಮಲಯಾಳಂ ಸ್ಟಾರ್ ನಟ ದುಲ್ಕರ್ ಸಲ್ಮಾನ್ (Dulquer Salmaan) ನಿವಾಸದ ಮೇಲೆ ಕಸ್ಟಮ್ ಅಧಿಕಾರಿಗಳು ದಾಳಿ ಮಾಡಿ 2 ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ದಾಖಲೆಗಳನ್ನು ಹಾಜರುಪಡಿಸುವಂತೆ ಸಮನ್ಸ್ ನೀಡಿದ್ದಾರೆ.

ಮಂಗಳವಾರ ಡಿಕ್ಯೂ ಮನೆಗೆ ಕಸ್ಟಮ್ಸ್ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ಎರಡು ಕಾರುಗಳನ್ನು ಸೀಜ್ ಮಾಡಿದ್ದಾರೆ. ಅಲ್ಲದೇ ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಕೇರಳದ ಕೊಚ್ಚಿಯ ತೇವರದಲ್ಲಿರುವ ನಟ ಪೃಥ್ವಿರಾಜ್ ಸುಕುಮಾರನ್ ಮನೆ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದರೆ ಅಲ್ಲಿ ಯಾವುದೇ ವಿದೇಶಿ ವಾಹನ ಪತ್ತೆಯಾಗಿಲ್ಲ ಎನ್ನಲಾಗಿದೆ. ನಟರು ಮಾತ್ರವಲ್ಲದೆ ಕೆಲವು ಉದ್ಯಮಿಗಳ ಮನೆಗಳ ಮೇಲೂ ಸಹ ಕಸ್ಟಮ್ಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಗೆ `ನುಮ್ಖೂರ್’ ಎಂದು ಹೆಸರಿಡಲಾಗಿದೆ. ವಾಹನಗಳನ್ನು ಮಲಯಾಳಂನಲ್ಲಿ ನುಮ್ಖೂರ್ ಎನ್ನಲಾಗುತ್ತದೆ.



