ಬೆಂಗಳೂರು: ಬಂಡೀಪುರ ಹುಲಿಸಂರಕ್ಷಿತಾರಣ್ಯದಲ್ಲಿ ಕಳೆದ ಐದು ದಿನಗಳಿಂದ ಕಾಡ್ಗಿಚ್ಚಿನಿಂದ ಸುಮಾರು ಹತ್ತು ಸಾವಿರ ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಈ ಹಿನ್ನೆಲೆಯಲ್ಲಿ ಬಂಡಿಪುರದತ್ತ ನಟ ದುನಿಯಾ ವಿಜಯ್ ಆಹಾರ ಸಾಮಗ್ರಿಗಳೊಂದಿಗೆ ಹೊರಟಿದ್ದಾರೆ.
ದುನಿಯಾ ವಿಜಿ ಬಂಡಿಪುರ ಅಗ್ನಿದುರಂತ ವಿಚಾರ ಕೇಳಿ ಸ್ವಯಂ ಸೇವಕರಿಗಾಗಿ ಅಗತ್ಯ ವಸ್ತುಗಳನ್ನ ತೆಗೆದುಕೊಂಡು ಹೊರಟಿದ್ದಾರೆ. ಸದ್ಯ ಕಾರ್ಯಾಚರಣೆಯಲ್ಲಿ ಭಾಗಿ ಆಗಿರುವವರಿಗೆ ಆಹಾರ ನೀರು, ಜ್ಯೂಸ್, ಬಿಸ್ಕೆಟ್ಸ್, ಜಾಮೂನ್ ಸೇರಿದಂತೆ ಅಗತ್ಯ ಆಹಾರ ಸಾಮಗ್ರಿಗಳನ್ನ ವಿತರಣೆ ಮಾಡಲಿದ್ದಾರೆ.
Advertisement
Advertisement
ಅಷ್ಟೇ ಅಲ್ಲದೇ ಕಾರ್ಯಾಚರಣೆಯಲ್ಲಿ ಭಾಗಿಯಾಗಿ ಅರಣ್ಯ ಸಿಬ್ಬಂದಿಗಳಿಗೆ ದುನಿಯಾ ವಿಜಯ್ ಸಹಾಯ ಮಾಡಲಿದ್ದಾರೆ. ನಟ ದರ್ಶನ್ ಕೂಡ ಹುಲಿರಕ್ಷಿತಾರಣ್ಯ ಉಂಟಾಗಿರುವ ಕಾಡ್ಗಿಚ್ಚಿನಿಂದ ಸಾಕಷ್ಟು ವನ್ಯಜೀವಿ ಸಂಕುಲಕ್ಕೆ ತೊಂದರೆಯಾಗಿದ್ದು, ಬೆಂಕಿ ನಂದಿಸಲು ಸ್ವಯಂ ಸೇವಕರು ಸರ್ಕಾರದ ಇಲಾಖೆಯೊಂದಿಗೆ ಕೈ ಜೋಡಿಸಬೇಕು ಎಂದು ಅಭಿಮಾನಿಗಳಲ್ಲಿ ವಿನಂತಿ ಮಾಡಿದ್ದರು.
Advertisement
ಕಳೆದ 5 ದಿನಗಳಿಂದ ಬಂಡೀಪುರ ಅಭಯಾರಣ್ಯದಲ್ಲಿ ಪದೇ ಪದೇ ಕಾಡ್ಗಿಚ್ಚು ಕಾಣಿಸಿಕೊಳ್ಳುತ್ತಿದ್ದು, ಅಗ್ನಿಶಾಮಕ ಇಲಾಖೆ ಸೇರಿದಂತೆ ಹಲವು ಸ್ವಯಂ ಸೇವಕರು ಈಗಾಗಲೇ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಸತತ ಪ್ರಯತ್ನ ನಡುವೆಯೂ ಬೆಂಕಿ ನರ್ತನ ಮುಂದುವರಿದಿದ್ದು, ಅನೇಕ ಪ್ರಾಣಿಗಳು ಬೆಂಕಿಯಲ್ಲಿ ಸಿಕ್ಕಿ ಭಸ್ಮವಾಗಿದೆ. ಈ ಕುರಿತಂತೆ ದರ್ಶನ ಅವರು ಕೂಡ ಫೋಟೋ ಹಾಕಿ ಟ್ವೀಟ್ ಮಾಡಿದ್ದರು.
Advertisement
ಬಂಡೀಪುರ ಅಭಯಾರಣ್ಯದಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ ಸಾಕಷ್ಟು ವನಜೀವಿ ಸಂಕುಲಕ್ಕೆ ತೊಂದರೆಯುಂಟಾಗಿದೆ. ಸರ್ಕಾರ, ಅರಣ್ಯ ಇಲಾಖೆ ಹಾಗೂ ಹಲವಾರು ಸ್ವಯಂಸೇವಕರು ಜೊತೆಗೂಡಿ ಈ ಅವಘಡವನ್ನು ಶಮನ ಮಾಡಲು ಯತ್ನಿಸುತ್ತಿದ್ದಾರೆ. ಆಸಕ್ತಿಯುಳ್ಳ ಸ್ವಯಂಸೇವಕರು ದಯಮಾಡಿ ಈ ಅಭಿಯಾನದಲ್ಲಿ ನೆರವಾಗಬೇಕಾಗಿ ವಿನಂತಿ pic.twitter.com/ES0ZsB6Eap
— Darshan Thoogudeepa (@dasadarshan) February 24, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv