ಬೆಂಗಳೂರು: ನಟ ದುನಿಯಾ ವಿಜಿ ಮೇಲೆ ದಾಖಲಾಗಿರುವ ಹಲ್ಲೆ ಪ್ರಕರಣದ ವಿಚಾರಣೆ ಡಿಸೆಂಬರ್ 12ಕ್ಕೆ ಮುಂದೂಡಿಕೆಯಾಗಿದೆ.
ಜಿಮ್ ಟ್ರೈನರ್ ಮಾರುತಿ ಗೌಡ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಿ ಇಂದು 8 ನೇ ಎಸಿಎಂಎಂ ಕೋರ್ಟ್ ಗೆ ಹಾಜರಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಜಿಗೆ ಷರತ್ತುಬದ್ಧ ಜಾಮೀನು ದೊರೆತಿದ್ದು, ಜಾಮೀನಿನ ನಂತರದ ಮೊದಲ ವಿಚಾರಣೆ ಇಂದು ನಡೆದಿತ್ತು. ಹೀಗಾಗಿ ವಿಜಿ ಇಂದು ನ್ಯಾ.ಮಹೇಶ್ ಬಾಬು ಮುಂದೆ ಹಾಜರಾಗಿದ್ದರು.
Advertisement
Advertisement
ಖುದ್ದು ಹಾಜರಿಗೆ ಸೂಚನೆ ಇಲ್ಲದಿದ್ದರೂ ಕೋರ್ಟ್ ಗೆ ಹಾಜರಾಗಿದ್ದು, ವಿಜಿ ಪರ ವಕೀಲರು ಚಾರ್ಜ್ ಶೀಟ್ ಹಾಕುವವರೆಗೂ ಕೋರ್ಟ್ ಗೆ ಖುದ್ದು ಹಾಜರಾತಿಗೆ ವಿನಾಯಿತಿ ಕೇಳಿದ್ದಾರೆ. ಆದ್ರೆ ನ್ಯಾ. ಮಹೇಶ್ ಬಾಬು ಅವರು ವಕೀಲರ ಮನವಿಯನ್ನು ತಿರಸ್ಕರಿಸಿದ್ದಾರೆ. ಅಲ್ಲದೇ ಡಿಸೆಂಬರ್ 12 ಕ್ಕೆ ಅರ್ಜಿ ವಿಚಾರಣೆ ಮುಂದೂಡಿ, ಮುಂದಿನ ವಿಚಾರಣೆ ವೇಳೆ ಹಾಜರಾಗಲು ಸೂಚನೆ ನೀಡಿದ್ದಾರೆ.
Advertisement
Advertisement
ಕಾನೂನಿನ ಮೇಲೆ ತಮಗಿರುವ ಗೌರವ ವ್ಯಕ್ತಪಡಿಸಲು ವಿಜಿ ಇಂದು ಕೋರ್ಟ್ ಮುಂದೆ ಹಾಜರಾಗಿದ್ದರು. ದುನಿಯಾ ವಿಜಿ ಜೊತೆ ಇತರೆ ಮೂವರು ಆರೋಪಿಗಳು ಕೂಡ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಕೋರ್ಟ್ ನಿಂದ ಹೊರಬರುತ್ತಿದ್ದಂತೆಯೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ವಿಜಿ ನಿರಾಕರಿಸಿದರು.
ಏನಿದು ಪ್ರಕರಣ?
ಸೆಪ್ಟೆಂಬರ್ 22ರ ಶನಿವಾರ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಮಿಸ್ಟರ್ ಬೆಂಗಳೂರು ಬಾಡಿ ಬಿಲ್ಡಿಂಗ್ ಸ್ಪರ್ಧೆ ನಡೆಯುತಿತ್ತು. ಈ ಕಾಂಪಿಟೇಷನ್ ನೋಡಲು ದುನಿಯಾ ವಿಜಿ ಮತ್ತು ತಂಡ ಬಂದಿತ್ತು. ಈ ವೇಳೆ ಪಾನಿಪೂರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಮತ್ತು ದುನಿಯಾ ವಿಜಿ ನಡುವೆ ಮಾತಿನ ಚಕಮಕಿ ನಡೆದಿದೆ. ಆದರೆ ಗಲಾಟೆ ವಿಕೋಪಕ್ಕೆ ತಿರುಗಿ ದುನಿಯಾ ವಿಜಯ್ ಗ್ಯಾಂಗ್, ಮಾರುತಿಗೌಡನ ಮೇಲೆ ಹಲ್ಲೆ ನಡೆಸಿ ಕಾರಿನಲ್ಲಿ ಹಾಕಿಕೊಂಡು ಕಿಡ್ನಾಪ್ ಮಾಡಿದ್ದರು. ದುನಿಯಾ ವಿಜಿ, ಮಣಿ ಮತ್ತು ಪ್ರಸಾದ್ ಸಹಚರರಿಂದ ಈ ಕೃತ್ಯ ನಡೆದಿದೆ ಆರೋಪ ಕೇಳಿ ಬಂದಿತ್ತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv