ದುನಿಯಾ ವಿಜಯ್ (Duniya Vijay) ನಟ ಕಮ್ ನಿರ್ದೇಶಕನಾಗಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಫ್ಯಾನ್ಸ್‌ಗೆ ನಟ ಕಹಿ ಸುದ್ದಿಯೊಂದನ್ನು ಕೊಟ್ಟಿದ್ದಾರೆ. ಜ.20ರಂದು ವಿಜಯ್ ಹುಟ್ಟುಹಬ್ಬವಾಗಿದ್ದು, ಅಂದು ಬರ್ತ್‌ಡೇ ಆಚರಣೆಯನ್ನು ಕ್ಯಾನ್ಸಲ್ ಮಾಡಿದ್ದಾರೆ. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ.
ನನ್ನ ಪ್ರೀತಿಯ ಅಭಿಮಾನಿಗಳೇ, ಪ್ರತಿ ವರ್ಷವೂ ನನ್ನ ಹುಟ್ಟುಹಬ್ಬವನ್ನು ನಿಮ್ಮ ಮನೆಯ ಊರಿನ ಹಬ್ಬವನ್ನಾಗಿ ನೀವುಗಳು ಅಂದರೆ ನನ್ನ ಅಭಿಮಾನಿಗಳು ಆಚರಣೆ ಮಾಡುತ್ತಾ ಇದ್ರಿ. ಈ ಬಾರಿಯೂ ನಿಮ್ಮ ಜೊತೆ ನಾನು ಹುಟ್ಟು ಹಬ್ಬವನ್ನು ಆಚರಿಸಬೇಕು ಎಂಬ ಆಸೆ ಇತ್ತು. ಆದರೆ ಕೆಲಸ ಎಂಬ ಹೊಣೆ ನನ್ನ ಮೇಲಿದೆ. ತಾವೆಲ್ಲರೂ ನಾನು ಮಾಡುವ ಕೆಲಸಕ್ಕೆ ನನ್ನ ಜೊತೆ ನಿಂತು ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ್ದೀರ. ಪ್ರತಿ ಬಾರಿಯಂತೆ ಈ ಬಾರಿ ನಾನು ಹುಟ್ಟುಹಬ್ಬದ ದಿನ ನನ್ನ ತಾಯಿ, ತಂದೆ ಸಮಾಧಿ ಬಳಿ ಸಿಗುವುದಿಲ್ಲ. ಅಂದು ಜಡೇಶ್ ಕೆ. ಹಂಪಿ ನಿರ್ದೇಶನ ಮಾಡುತ್ತಿರುವ ಸಿನಿಮಾ ಚಿತ್ರೀಕರಣದಲ್ಲಿರುತ್ತೇನೆ. ನಿಮ್ಮ ಪ್ರೀತಿ ಅಭಿಮಾನದ ನಿರೀಕ್ಷೆಯಂತೆ ಅಂದೇ ‘VK 29’ ಚಿತ್ರದ ಫಸ್ಟ್ ಲುಕ್ ನಿಮಗಾಗಿ ಬಿಡುಗಡೆ ಮಾಡ್ತಿದ್ದೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ದುನಿಯಾ ವಿಜಯ್ ಬರೆದುಕೊಂಡಿದ್ದಾರೆ.
View this post on Instagram
ಬಳಿಕ ಶನಿವಾರ ಭಾನುವಾರ ನಾನೂ ಊರಲ್ಲಿ ಇರುವುದಿಲ್ಲ. ದಯವಿಟ್ಟು ಯಾರೂ ಕೂಡ ಮನೆ ಬಳಿ ಬಂದು ಕಾಯಬೇಡಿ. ಧನ್ಯವಾದಗಳು ಎಂದು ನಟ ವಿಶೇಷ ಮನವಿ ಮಾಡಿದ್ದಾರೆ. ಇದನ್ನೂ ಓದಿ:ಸೈಫ್ ಅಲಿ ಖಾನ್ ಕೇಸ್‌ಗೆ ಬಿಗ್ ಟ್ವಿಸ್ಟ್: ಘಟನೆಯ ಇಂಚಿಂಚೂ ವಿವರ ಇಲ್ಲಿದೆ
ಇನ್ನೂ ಮಗಳು ಮೋನಿಷಾ ಚೊಚ್ಚಲ ಸಿನಿಮಾ ವಿಜಯ್ ನಿರ್ದೇಶನ ಮಾಡುತ್ತಿದ್ದಾರೆ. ಜಡೇಶ್ ಕೆ. ಹಂಪಿ ಡೈರೆಕ್ಷನ್ ಸಿನಿಮಾದಲ್ಲಿ ನಟ ಬ್ಯುಸಿಯಾಗಿದ್ದಾರೆ.