ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸುಭಾಸ್ಕರನ್ ಅವರು ನಿರ್ಮಿಸುತ್ತಿರುವ, ಲಕ್ಷ್ಮಣ್ ನಿರ್ದೇಶನದಲ್ಲಿ ಯುವರಾಜ ನಿಖಿಲ್ ಕುಮಾರ್ (Nikhil Kumar) ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ.
Advertisement
ಬಹು ನಿರೀಕ್ಷಿತ ಈ ಚಿತ್ರದಲ್ಲಿ ಸ್ಯಾಂಡಲ್ ವುಡ್ ಸಲಗ ದುನಿಯಾ ವಿಜಯ್ (Duniya Vijay) ಅವರು ನಟಿಸುತ್ತಿದ್ದಾರೆ. ವಿಜಯ್ ಅವರ ಪಾತ್ರದ ಬಗ್ಗೆ ಚಿತ್ರತಂಡ ಗುಟ್ಟು ಬಿಟ್ಟುಕೊಟ್ಟಿಲ್ಲ. ಸದ್ಯದಲ್ಲೇ ವಿಜಯ್ ಅವರು ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ವಿಜಯ್ ಅವರ ಪಾತ್ರ ಏನ್ನಿರಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಬಗ್ಗೆ ಸಿನಿರಸಿಕರಿಗೆ ಸಾಕಷ್ಟು ನಿರೀಕ್ಷೆಯಿದೆ.
Advertisement
Advertisement
ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ ಹಾಗೂ ವಂಶಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಈಗಾಗಲೇ ಅನೇಕರು ಶೂಟಿಂಗ್ ಸೆಟ್ ಗೆ ಭೇಟಿ ಕೊಟ್ಟು ಕುತೂಹಲವನ್ನಂತೂ ಮೂಡಿಸಿದ್ದಾರೆ.
Advertisement
ಈ ಸಿನಿಮಾದ ಮೂಲಕ ಬಾಲಿವುಡ್ ನಟಿ ಯುಕ್ತಿ ತಾರೇಜ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ. ಇದು ಇವರ ದಕ್ಷಿಣದ ಎರಡನೇ ಚಿತ್ರವಾದರೆ, ಕನ್ನಡದಲ್ಲಿ ಮೊದಲು. ನಟ ನಾಗಶೌರ್ಯ ಜೊತೆ ರಂಗಾಬಲಿ ಸಿನಿಮಾದ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟವರು ಯುಕ್ತಿ ತಾರೇಜ. ಮಾಡೆಲಿಂಗ್ ಕ್ಷೇತ್ರದಲ್ಲಿದ್ದ ಹುಡುಗಿಯನ್ನು ಟಾಲಿವುಡ್ ಗೆ ಕರೆತರಲಾಗಿತ್ತು.
Web Stories