Connect with us

ಮಾಲೂರಿನಲ್ಲಿ ನಟ ದುನಿಯಾ ವಿಜಯ್ ನೋಡಲು ಕಿಕ್ಕಿರಿದು ಸೇರಿದ ಅಭಿಮಾನಿಗಳು

ಮಾಲೂರಿನಲ್ಲಿ ನಟ ದುನಿಯಾ ವಿಜಯ್ ನೋಡಲು ಕಿಕ್ಕಿರಿದು ಸೇರಿದ ಅಭಿಮಾನಿಗಳು

ಟ ದುನಿಯಾ ವಿಜಯ್ ‘ಸಲಗ’ ಚಿತ್ರದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ನಟನೆ ಜೊತೆ ‘ಸಲಗ’ ಮೂಲಕ ಡೈರೆಕ್ಟರ್ ಕ್ಯಾಪ್ ಕೂಡ ತೊಟ್ಟಿದ್ದಾರೆ ಬ್ಲ್ಯಾಕ್ ಕೋಬ್ರಾ. ಸದ್ಯ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಕೆಲಸ ಹಾಗೂ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಇರುವ ದುನಿಯಾ ವಿಜಿ ತಮ್ಮ ಬ್ಯುಸಿ ಶೆಡ್ಯೂಲ್ ನಡುವೆಯೂ ಮಾಲೂರಿನ ತಮ್ಮ ಅಭಿಮಾನಿಗಳು ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯಲ್ಲಿ ಭಾಗಿಯಾಗಿದ್ದಾರೆ.

ಮಾಲೂರಿನ ಹೋಂಡಾ ಕ್ರೀಡಾಂಗಣದಲ್ಲಿ ವಿಜಯ್ ಅಭಿಮಾನಿಗಳ ಸೇವಾ ಸಮಿತಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ‘ಸಲಗ’ ಚಿತ್ರತಂಡ ಕ್ರಿಕೆಟ್ ಪಂದ್ಯವನ್ನಾಡಿ ವಿಜಯ ಸಾಧಿಸಿದೆ. ದುನಿಯಾ ವಿಜಿ ಮಾಲೂರಿಗೆ ಬರುವ ವಿಚಾರ ತಿಳಿದ ವಿಜಯ್ ಅಭಿಮಾನಿಗಳು ಹೋಂಡಾ ಕ್ರೀಡಾಂಗಣಕ್ಕೆ ಜಮಾಯಿಸಿದ್ದರು. ಕೋಲಾರದ ಸುತ್ತಮುತ್ತಲಿನ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಕ್ರೀಡಾಂಗಣಕ್ಕೆ ಆಗಮಿಸಿ ನೆಚ್ಚಿನ ನಟ ದುನಿಯಾ ವಿಜಿಯನ್ನು ಕಣ್ತುಂಬಿಕೊಂಡಿದ್ದಾರೆ.

ಅಭಿಮಾನಿಗಳ ಜೊತೆ ಸಮಯ ಕಳೆದ ದುನಿಯಾ ವಿಜಿ ನಂತರ ಮಾಲೂರಿನಲ್ಲಿರುವ ಡಾ.ರಾಜ್‍ಕುಮಾರ್ ಹಾಗೂ ಡಾ.ವಿಷ್ಣುವರ್ಧನ್ ಪುತ್ಥಳಿಗೆ ಹೂವಿನ ಮಾಲೆ ಅರ್ಪಿಸಿ ಗೌರವ ಸಲ್ಲಿಸಿದ್ದಾರೆ. ದುನಿಯಾ ವಿಜಯ್ ಹಾಗೂ ಚಿತ್ರತಂಡದ ಜೊತೆ ಚಿತ್ರದ ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಕೂಡ ಮಾಲೂರಿನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗಿಯಾಗಿದ್ದರು.

ದುನಿಯಾ ವಿಜಯ್ ನಿರ್ದೇಶನದ ‘ಸಲಗ’ ಸಿನಿಮಾ ಸ್ಯಾಂಡಲ್‍ವುಡ್ ಅಂಗಳದಲ್ಲಿ ಬಹು ನಿರೀಕ್ಷೆಯನ್ನು ಹುಟ್ಟುಹಾಕಿದ್ದು, ಎಲ್ಲರೂ ಕಾತರದಿಂದ ಸಿನಿಮಾಗಾಗಿ ಎದುರು ನೋಡುತ್ತಿದ್ದಾರೆ. ಚಿತ್ರದಲ್ಲಿ ದುನಿಯಾ ವಿಜಿಗೆ ಜೋಡಿಯಾಗಿ ಸಂಜನಾ ಆನಂದ್ ಸ್ಕ್ರೀನ್ ಶೇರ್ ಮಾಡಿದ್ದಾರೆ. ಟಗರು ಖ್ಯಾತಿಯ ಸಂಗೀತ ನಿರ್ದೇಶಕ ಚರಣ್ ರಾಜ್ ಸಂಗೀತ ನಿರ್ದೇಶನದಲ್ಲಿ ಚಿತ್ರದ ಹಾಡುಗಳು ಮೂಡಿಬಂದಿದ್ದು, ಚಿತ್ರದ ಟೈಟಲ್ ಟ್ರ್ಯಾಕ್ ಸೂಪರ್ ಹಿಟ್ ಆಗಿದೆ. ಶಿವಸೇನಾ ಛಾಯಾಗ್ರಹಣ ‘ಸಲಗ’ ಚಿತ್ರಕ್ಕಿದೆ. ಡಾಲಿ ಧನಂಜಯ್ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಅಭಿನಯಿಸಿದ್ದು, ಅಚ್ಯುತ್ ಕುಮಾರ್, ರಂಗಾಯಣ ರಘು, ಯಶ್ ಶೆಟ್ಟಿ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

Advertisement
Advertisement