ದುನಿಯಾ ವಿಜಯ್ ಫ್ಯಾನ್ಸ್‌ಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ. ಅವರ ಚಿತ್ರಕ್ಕಾಗಿ ಎದುರು ನೋಡ್ತಾ ಇರುವ ಅಭಿಮಾನಿಗಳಿಗೆ ಈಗ ಶುಭ ಸುದ್ದಿ ಸಿಕ್ಕಿದೆ. ವಿಜಯ್ ನಟನೆಯ ‘ಭೀಮ’ (Bheema) ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದೆ. ಇದನ್ನೂ ಓದಿ:ಕಾಸ್ಟಿಂಗ್ ಕೌಚ್ ಬಗ್ಗೆ ಕರಾಳ ಸತ್ಯ ಬಿಚ್ಚಿಟ್ಟ ‘ಸೂರ್ಯವಂಶ’ ನಟಿ
2021ರಲ್ಲಿ ‘ಸಲಗ’ ಸಿನಿಮಾ ದುನಿಯಾ ವಿಜಯ್ (Duniya Vijay) ನಟಿಸಿ, ನಿರ್ದೇಶನ ಮಾಡಿದ್ದರು. ಈ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿತ್ತು. ಅದೇ ರೀತಿಯ ರೌಡಿಸಂ ಥೀಮ್ ಕಥೆ ಇಟ್ಟುಕೊಂಡು ಭೀಮ ಚಿತ್ರ ಡೈರೆಕ್ಷನ್ ಮಾಡಿದ್ದಾರೆ ವಿಜಯ್. ಇದೇ ಆಗಸ್ಟ್ 9ರಂದು ಸಿನಿಮಾ ರಿಲೀಸ್ ಆಗಲಿದೆ. ಇದನ್ನೂ ಓದಿ:‘ಕೆಂಪೇಗೌಡ’ ಪಾತ್ರದಲ್ಲಿ ಡಾಲಿ- ಟಿ.ಎಸ್ ನಾಗಾಭರಣ ಆ್ಯಕ್ಷನ್ ಕಟ್
View this post on Instagram
‘ಸಲಗ’ ಬಳಿಕ ಬಾಲಯ್ಯ ನಟನೆಯ ‘ವೀರ ಸಿಂಹ ರೆಡ್ಡಿ’ ಚಿತ್ರದಲ್ಲಿ ಖಡಕ್ ವಿಲನ್ ಆಗಿ ದುನಿಯಾ ವಿಜಯ್ ನಟಿಸಿದ್ದರು. ಸಲಗ ಆದ್ಮೇಲೆ ಸತತ ಮೂರು ವರ್ಷಗಳ ನಂತರ ಕನ್ನಡದ ಭೀಮ ಚಿತ್ರದ ವಿಜಯ್ ಮಾಸ್ ಎಂಟ್ರಿ ಕೊಡ್ತಿದ್ದಾರೆ. ಇದು ಸಹಜವಾಗಿಯೇ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.
‘ಭೀಮ’ ಚಿತ್ರದಲ್ಲಿ ಅಶ್ವಿನಿ ಅಂಬರೀಷ್, ಕಾಕ್ರೋಚ್ ಸುಧಿ, ರಂಗಾಯಣ ರಘು, ಅಚ್ಯುತ್ ಕುಮಾರ್ ಮೊದಲಾದವರು ನಟಿಸಿದ್ದಾರೆ. ಕೃಷ್ಣ ಸಾರ್ಥಕ್, ಜಗದೀಶ್ ಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ ಈ ಚಿತ್ರಕ್ಕೆ ಇದೆ.