ಹಾವೇರಿ: ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕರ ಹೆಸರಿನಲ್ಲಿ ನಕಲಿ ಪಾಸ್ ಸೃಷ್ಟಿಸಿ ಗದಗ ಜಿಲ್ಲೆಯಿಂದ ಹಾವೇರಿಗೆ ಪ್ರವೇಶ ಮಾಡುತ್ತಿದ್ದ ಕಾರು ಚಾಲಕ ಅಪರ ಜಿಲ್ಲಾಧಿಕಾರಿ(ಎಡಿಸಿ) ಯೋಗೇಶ್ವರ ಅವರ ಕೈಗೆ ಸಿಕ್ಕಿಬಿದ್ದಿದ್ದಾನೆ. ನಕಲಿ ಪಾಸ್ ಸೃಷ್ಟಿಕರ್ತನ ಮೇಲೆ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ.
Advertisement
ಕೊರೊನಾ ವೈರಸ್ ಹಿನ್ನೆಲೆ ಲಾಕ್‍ಡೌನ್ ಮಾಡಲಾಗಿದ್ದು, ವೈದ್ಯಕೀಯ ಹಾಗೂ ತುರ್ತು ಸೇವೆ ಹೊರತುಪಡಿಸಿ ಇತರ ವಾಹನಗಳ ಓಡಾಟಕ್ಕೆ ನಿರ್ಬಂಧ ಹೆರಲಾಗಿದೆ. ವೈದ್ಯಕೀಯ ಹಾಗೂ ತುರ್ತು ಕಾರಣಗಳಿದ್ದರೆ ಅಧಿಕೃತ ಪಾಸ್ ಪಡೆದು ಪ್ರಯಾಣಿಸಬಹುದು. ಆದರೆ ಚಾಲಕ ದಿಲೀಪ್ ಬಂಕಾಪುರ ಮಾರುತಿ ಸುಜುಕಿ ಬ್ರೆಜ್ಜಾ (ಕೆಎ-27 ಎನ್ 4122) ಕಾರಿಗೆ ಬ್ಯಾಡಗಿ ಶಾಸಕರು ಎಂಬಂತೆ ನಕಲಿ ಪಾಸ್ ಅಂಟಿಸಿಕೊಂಡು ಕುಟುಂಬದೊಂದಿಗೆ ಲಕ್ಷ್ಮೇಶ್ವರದಿಂದ ರಾಣೇಬೆನ್ನೂರಿಗೆ ತೆರಳುತ್ತಿದ್ದ.
Advertisement
ಚೆಕ್ ಪೋಸ್ಟ್ ಗಳ ತಪಾಸಣೆ ವೇಳೆ ಈ ಕಾರು ಗಮನಿಸಿದ ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಕಾರು ತಡೆದು ವಿಚಾರಣೆ ನಡೆಸಿದ್ದಾರೆ. ಕಾರಿನ ಮೇಲಿದ್ದ ಶಾಸಕರ ಹೆಸರಿನ ಪಾಸ್ ಕುರಿತು ಸಹ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಸಿಕ್ಕಿಬಿದ್ದಿದ್ದಾನೆ.
Advertisement
Advertisement
ಕಾರಿನ ಮೇಲಿದ್ದ ಶಾಸಕರ ಹೆಸರಿನ ಬಣ್ಣದ ಪಾಸ್ ಕುರಿತು ಸಂಶಯಗೊಂಡು ಸ್ಥಳದಲ್ಲೇ ಶಾಸಕರಿಗೆ ಕರೆಮಾಡಿ ಮಾಹಿತಿ ಪಡೆದಿದ್ದಾರೆ. ಈ ವೇಳೆಯಲ್ಲಿ ಶಾಸಕರು ಯಾರಿಗೂ ಪಾಸ್ ನೀಡಿಲ್ಲ ಎಂಬ ಮಾಹಿತಿ ನೀಡಿದ್ದಾರೆ. ಆಗ ನಕಲಿ ಪಾಸ್ ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಮೊಕದ್ದಮೆ ದಾಖಲಿಸಿ ಕಾರು ವಶಪಡಿಸಿಕೊಳ್ಳಲು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿರುವುದಾಗಿ ಅವರು ತಿಳಿಸಿದ್ದಾರೆ.