BollywoodCinemaLatestMain Post

ಜಿಮ್ ನಲ್ಲಿ ಹೃದಯಾಘಾತ: ಡೂಪ್ಲಿಕೇಟ್ ಸಲ್ಮಾನ್ ಖಾನ್ ನಿಧನ

ಬಾಲಿವುಡ್ (Bollywood) ಖ್ಯಾತ ನಟ ಸಲ್ಮಾನ್ ಖಾನ್ (Salman Khan) ಅವರ ಸಾಕಷ್ಟು ಸಿನಿಮಾಗಳಲ್ಲಿ ಡೂಪ್ ಆಗಿ ಕಾಣಿಸಿಕೊಳ್ಳುತ್ತಿದ್ದ ಸಾಗರ್ ಪಾಂಡೆ ನಿಧನರಾಗಿದ್ದಾರೆ.  ಜಿಮ್ ನಲ್ಲಿ ವ್ಯಾಯಾಮ ಮಾಡುವ ವೇಳೆ ಹೃದಯಾಘಾತವಾಗಿ ಇಹಲೋಕ ತ್ಯಜಿಸಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅತೀ ಸಣ್ಣ ವಯಸ್ಸಿನ ಸಾಗರ್ ಪಾಂಡೆ (Sagar Pandey) ನಿಧನಕ್ಕೆ ಬಾಲಿವುಡ್ ನ ಅನೇಕ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.

ಭಜರಂಗಿ ಭಾಯ್ ಜಾನ್, ದಬಾಂಗ್, ಟ್ಯೂಬ್ ಲೈಟ್ ಸೇರಿದಂತೆ ಹಲವು ಸಿನಿಮಾಗಳ ಸಾಹಸ ದೃಶ್ಯದಲ್ಲಿ ಸಲ್ಮಾನ್ ಖಾನ್ ಬದಲಾಗಿ ಸಾಗರ್ ಪಾಂಡೆ ಅವರೇ ಡೂಪ್ (Duplicate) ಆಗಿ ನಟಿಸಿದ್ದಾರೆ. ಈ ಕುರಿತು ಸಲ್ಮಾನ್ ಖಾನ್ ತಮ್ಮ ಅಧಿಕೃತ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಬರೆದುಕೊಂಡಿದ್ದು, ನನ್ನೊಂದಿಗೆ ಇದ್ದಕ್ಕೆ ಧನ್ಯವಾದಗಳು ಮತ್ತು ನಿಮ್ಮ ಆತ್ಮಕ್ಕೆ ಶಾಂತಿ ಕೋರುವೆ’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಖ್ಯಾತ ನಟಿ ಆಶಾ ಪರೇಖ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸಾಗರ್ ಪಾಂಡೆ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಹಂಚಿಕೊಂಡಿರುವ ಪ್ರಶಾಂತ್ ವಾಲ್ಡೆ, ಜಿಮ್ ನಲ್ಲಿ ವ್ಯಾಯಾಮ ಮಾಡುತ್ತಿರುವಾಗ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಬಾಳಾಸಾಹೇಬ್ ಠಾಕ್ರೆ ಟ್ರಾಮಾ ಕೇರ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆಸ್ಪತ್ರೆಯಲ್ಲಿಯೇ ಅವರ ನಿಧನವನ್ನು(Passed Away) ಘೋಷಣೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

Live Tv

Leave a Reply

Your email address will not be published. Required fields are marked *

Back to top button