Connect with us

Crime

ದುರ್ಗಾ ಪೂಜೆ ವೇಳೆ 8ರ ಬಾಲಕಿ ಮೇಲೆ ಅತ್ಯಾಚಾರ – ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆ

Published

on

ಜೈಪುರ: ದುರ್ಗಾ ಪೂಜೆ ವೇಳೆ 8 ವರ್ಷದ ಬಾಲಕಿ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ನಡೆಸಿದ ಘಟನೆ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ. ಈ ವಿಡಿಯೋ ರಸ್ತೆ ಬದಿಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಗೌರವ್ ಎಂದು ಗುರುತಿಸಲಾಗಿದ್ದು, ಈತ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಯನ್ನು ಗುರುತಿಸಿ ಆತನನ್ನು ಬಂಧಿಸಿದ್ದೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ದೇಶ್ಮುಖ್ ಸುದ್ದಿ ಸುಂಸ್ಥೆಗೆ ತಿಳಿಸಿದ್ದಾರೆ.

ಅಕ್ಟೋಬರ್ 6ರಂದು ಬೆಳಗ್ಗೆ 2 ಗಂಟೆ ಸುಮಾರಿಗೆ ಗೌರವ್ ಎಂಟು ವರ್ಷದ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಾಲಕಿ ದುರ್ಗಾ ಪೂಜೆ ವೀಕ್ಷಿಸಲು ಪೆಂಡಾಲ್‍ಗೆ ಆಗಮಿಸಿದ್ದಳು. ಪೂಜೆ ವೇಳೆ ಬಾಲಕಿಗೆ ಆಮಿಷವೊಡ್ಡಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಾವು ಬಾಲಕಿಯ ಮನೆಗೂ ತೆರಳಿದ್ದೆವು. ಈ ಘಟನೆ ಬಗ್ಗೆ ಆಕೆ ತನ್ನ ಪೋಷಕರಿಗೆ ತಿಳಿಸಿಲ್ಲ. ಆದರೆ ಈ ಕುರಿತು ಆರೋಪಿಯನ್ನು ವಿಚಾರಣೆ ನಡೆಸಿದ್ದು, ತಪ್ಪೊಪ್ಪಿಕೊಂಡಿದ್ದಾನೆ ಎಂದು ದೇಶ್ಮುಖ್ ತಿಳಿಸಿದ್ದಾರೆ. ಇದೀಗ 8 ವರ್ಷದ ಬಾಲಕಿಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *