Wednesday, 19th September 2018

ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಸಿದ್ದರಾಮಯ್ಯ ಸೈಡ್ ಲೈನ್?

ಬೆಂಗಳೂರು: ಕರ್ನಾಟಕ ಚುನಾವಣೆಯ ಸಂಪೂರ್ಣ ನೇತೃತ್ವ ವಹಿಸಿದ್ದ ಸಿದ್ದರಾಮಯ್ಯನವರು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಸೈಡ್ ಲೈನ್ ಆದ್ರಾ ಎನ್ನುವ ಪ್ರಶ್ನೆ ಈಗ ಎದ್ದಿದೆ.

ಫೋಟೋ ಶೂಟ್‍ನಿಂದ ಕೂಡ ಸಿದ್ದರಾಮಯ್ಯನವರು ದೂರ ಉಳಿದರು. ರಾಷ್ಟ್ರೀಯ ನಾಯಕರ ಫೋಟೋ ಶೂಟ್ ನಡೆದಾಗಲೂ ಬಾರದ ಕಾರಣ ಈಗ ಈ ಪ್ರಶ್ನೆ ಎದ್ದಿದೆ.

ಚುನಾವಣೆಗೆ ಮೊದಲು ಸಿದ್ದರಾಮಯ್ಯ ಜೊತೆ ರಾಹುಲ್ ನಿಕಟ ಬಾಂಧವ್ಯ ಹೊಂದಿದ್ದರು. ಹಲವು ಸಂದರ್ಭದಲ್ಲಿ ಸಿದ್ದರಾಮಯ್ಯ ಮಾತೇ ಫೈನಲ್ ಆಗುತಿತ್ತು. ಆದರೆ ಅತಂತ್ರ ಫಲಿತಾಂಶದ ಬಳಿಕ ಸಿದ್ದರಾಮಯ್ಯನವರಿಗೆ ಸರ್ಕಾರದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿಲ್ಲ ಎನ್ನುವ ಆರೋಪಗಳು ಕೇಳಿ ಬರುತ್ತಿದೆ.

ಮೈತ್ರಿ ಸರ್ಕಾರ ಇರುವಾಗ ಸಿದ್ದರಾಮಯ್ಯಗೆ ಮಣೆ ಹಾಕಿದ್ರೆ ಕಷ್ಟ ಎನ್ನುವ ನಿಟ್ಟಿನಲ್ಲಿ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆಯಾ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ.

ಬಹುಮತ ಸಾಬೀತುಪಡಿಸದೇ ಲಾಬಿ ಮಾಡಲೂ ಯಾರೂ ದೆಹಲಿಗೆ ಬರಬೇಡಿ ಅಂತ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಸೂಚನೆ ನೀಡಿತ್ತು. ಆದರೆ ಈ ನಡುವೆ ಎಚ್‍ಡಿ ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಭೇಟಿ ಮಾಡಿದ್ದರು. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದಾಗ ಮೈತ್ರಿ ಸರ್ಕಾರ ಬಂದಾಗ ರಾಜ್ಯ ಕಾಂಗ್ರೆಸ್ ನಾಯಕರನ್ನೇ ಹೈಕಮಾಂಡ್ ಕಡೆಗಣಿಸುತ್ತಿದೆಯಾ? ಸಿದ್ದರಾಮಯ್ಯ ಸಪ್ಪೆಯಾದ್ರಾ ಎಂಬ ಪ್ರಶ್ನೆ ಎದ್ದಿದೆ.

 

Leave a Reply

Your email address will not be published. Required fields are marked *