ಸ್ಟಾರ್ ನಟ ಅಲ್ಲು ಅರ್ಜುನ್ (Allu Arjun) ನಟನೆಯ ‘ಪುಷ್ಪ 2’ (Pushpa 2) ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಸಂಭವಿಸಿ ಓರ್ವ ಮಹಿಳೆ ಮೃತಪಟ್ಟಿರುವ ಘಟನೆಗೆ ರಶ್ಮಿಕಾ ಮಂದಣ್ಣ (Rashmika Mandanna) ವಿಷಾದ ವ್ಯಕ್ತಪಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ನಟಿ ರಿಯಾಕ್ಟ್ ಮಾಡಿದ್ದಾರೆ. ಇದನ್ನೂ ಓದಿ:ಸೂಲಗಿತ್ತಿಯ ಕಥಾನಕ ‘ತಾಯವ್ವ’ ಶೀರ್ಷಿಕೆ ಅನಾವರಣ
Advertisement
ಡಿ.4ರಂದು ರಾತ್ರಿ ‘ಪುಷ್ಪ 2’ ಸಿನಿಮಾ ಶೋ ವೇಳೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಆಗ ಓಡುವ ಭರದಲ್ಲಿ ಕಾಲ್ತುಳಿತ ಸಂಭವಿಸಿದೆ. ಈ ಬೆನ್ನಲ್ಲೇ ರಶ್ಮಿಕಾ ಪ್ರತಿಕ್ರಿಯಿಸಿ, ಈ ವಿಚಾರ ಕೇಳಿ ವಿಷಾದವಾಯ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
Advertisement
I am so sorry to hear this. https://t.co/O7Ca6tSRyo
— Rashmika Mandanna (@iamRashmika) December 5, 2024
Advertisement
ಜೊತೆಗೆ ನಿರ್ಮಾಣ ಸಂಸ್ಥೆಯಾದ ಮೈತ್ರಿ ಮೂವಿ ಮೇಕರ್ಸ್ ಕೂಡ ಪ್ರತಿಕ್ರಿಯೆ ನೀಡಿದೆ. ಕಳೆದ ರಾತ್ರಿಯ ಸ್ಕ್ರೀನಿಂಗ್ ಸಮಯದಲ್ಲಿ ಸಂಭವಿಸಿದ ದುರಂತ ಘಟನೆಯಿಂದ ನಾವು ತುಂಬಾ ದುಃಖಿತರಾಗಿದ್ದೇವೆ. ಈ ಘಟನೆಯಿಂದ ದುಃಖಿತರಾಗಿರುವ ಕುಟುಂಬಕ್ಕೆ ಶಕ್ತಿ ಕೊಡಲಿ. ಗಂಭೀರ ಸ್ಥಿತಿಯಲ್ಲಿರುವ ಚಿಕ್ಕ ಮಗು ವೈದ್ಯಕೀಯ ಚಿಕಿತ್ಸೆಯಲ್ಲಿದೆ. ಈ ಕಷ್ಟದ ಸಮಯದಲ್ಲಿ ಅವರ ಜೊತೆ ನಿಲ್ಲಲು ಮತ್ತು ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡಲು ನಾವು ಬದ್ಧರಾಗಿದ್ದೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಚಿತ್ರದ ನಿರ್ಮಾಣ ಸಂಸ್ಥೆ ತಿಳಿಸಿದೆ.
Advertisement
ಅಷ್ಟಕ್ಕೂ ಆಗಿದ್ದೇನು?
ಡಿ.4ರಂದು ಹೈದರಾಬಾದ್‌ನ ಖಖಿಅ ಕ್ರಾಸ್‌ರೋಡ್ಸ್ನ ಸಂಧ್ಯಾ ಥಿಯೇಟರ್‌ನಲ್ಲಿ ಈ ದುರಂತ ಸಂಭವಿಸಿತು. ದಿಲ್‌ಸುಖ್‌ನಗರದ ರೇವತಿ ಮೃತ ಮಹಿಳೆ. ಪತಿ ಭಾಸ್ಕರ್ ಮತ್ತು ಇಬ್ಬರು ಮಕ್ಕಳೊಂದಿಗೆ ಕಾರ್ಯಕ್ರಮಕ್ಕೆ ಬಂದಿದ್ದರು. ರಾತ್ರಿ 10:30ರ ಸುಮಾರಿಗೆ ಥಿಯೇಟರ್‌ನಲ್ಲಿ ಪ್ರೇಕ್ಷಕರು ಕಿಕ್ಕಿರಿದು ನೆರೆದಿದ್ದರು. ಸಿನಿಮಾ ಸ್ಕ್ರೀನಿಂಗ್‌ನಲ್ಲಿ ಅಲ್ಲು ಅರ್ಜುನ್ ಹಾಜರಿದ್ದರು. ಈ ವೇಳೆ ನೂಕುನುಗ್ಗಲು ಜಾಸ್ತಿಯಾಗಿ ಕಾಲ್ತುಳಿತ ಸಂಭವಿಸಿತು. ಪರಿಣಾಮವಾಗಿ 39 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಆಕೆಯ ಚಿಕ್ಕ ಮಗನ ಸ್ಥಿತಿ ಗಂಭೀರವಾಗಿದೆ. ಜನರ ಗುಂಪನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು, ಬಾಲಕನ ಸ್ಥಿತಿ ಗಂಭೀರವಾಗಿದೆ.