ಹೆಚ್‌ಡಿಕೆ ಹೋದ್ರೂ ಪ್ರವಾಸಿ ಮಂದಿರದ ಬೀಗ ತೆಗೆಯದ ಅಧಿಕಾರಿಗಳು

Public TV
1 Min Read
during union minister HD Kumaraswamy visit time Nanjangud pravasi mandira closed 1

ಮೈಸೂರು: ನಂಜನಗೂಡು (Nanjangud) ಪ್ರವಾಸಿ ಮಂದಿರವನ್ನು (Pravasi mandira) ನಿರ್ವಹಣೆ ಮಾಡುವ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿದ್ದಾರೆ.

ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಇಂದು ನಂಜನಗೂಡು ಪ್ರವಾಸ ಕೈಗೊಂಡಿದ್ದಾರೆ. ಇದನ್ನೂ ಓದಿ: ಮೈಸೂರಿನ ವಿಜಯ್‌ ಶಂಕರ್‌ ಈಗ ಮೇಘಾಲಯದ ರಾಜ್ಯಪಾಲ

 

during union minister HD Kumaraswamy visit time Nanjangud pravasi mandira closed 2

ಇಂದು ಬೆಳಗ್ಗೆ ಪ್ರವಾಸಿ ಮಂದಿರಕ್ಕೆ ವಿಶ್ರಾಂತಿ ಪಡೆಯಲು ಆಗಮಿಸಿದ್ದಾರೆ. ಈ ವೇಳೆ ಪ್ರವಾಸಿ ಮಂದಿರದ ಬಾಗಿಲಿಗೆ ಬೀಗ ಹಾಕಲಾಗಿತ್ತು. ಪ್ರವಾಸಿ ಮಂದಿರದ ಹೊರ ಭಾಗ ಕಾರಿನಲ್ಲೇ ಕುಳಿತ ಎಚ್‌ಡಿಕೆ 10 ನಿಮಿಷ ಕಾದರೂ ಯಾವೊಬ್ಬ ಸಿಬ್ಬಂದಿ ಬಂದಿರಲಿಲ್ಲ. ಕೊನೆಗೆ ಕುಮಾರಸ್ವಾಮಿ ಕಾರಿನ ಮೂಲಕ ತೆರಳಿದ್ದಾರೆ.

ಹೆಚ್‌ಡಿಕೆ ಭೇಟಿ ವಿಚಾರವನ್ನು ಅಧಿಕಾರಿಗಳಿಗೆ ಮೊದಲೇ ತಿಳಿಸಲಾಗಿತ್ತು ಮತ್ತು ಪ್ರವಾಸ ಪಟ್ಟಿಯನ್ನು ಸಚಿವಾಲಯದ ಸಿಬ್ಬಂದಿ ಬಿಡುಗಡೆ ಮಾಡಿದ್ದರು. ಪ್ರವಾಸಿ ಮಂದಿರದ ಬಾಗಿಲು ತೆರೆಯದ್ದಕ್ಕೆ ಕಾರಿನಲ್ಲಿದ್ದ ಮಾಜಿ ಸಚಿವ ಸಾ.ರಾ. ಮಹೇಶ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

Share This Article