ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿ ಗೌರವಾನ್ವಿತ ಡಿಕ್ ಶೂಫ್ (H.E. Mr. Dick Schoof) ಅವರ ನಿಯೋಗಕ್ಕೆ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಕೆ. ಜಿ ಜಗದೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿಗಳು ಫೆ.20 ರಂದು ಆರ್.ಟಿ. ನಗರದಲ್ಲಿರುವ ಫಿಲಿಪ್ಸ್ ಇನ್ನೋವೇಶನ್ ಕ್ಯಾಂಪಸ್ (Philips Innovation Campus), ಇನ್ಫೆಂಟ್ರಿ ರಸ್ತೆಯಲ್ಲಿರುವ ಬೆಂಗಳೂರು ಸಂಚಾರ ಪೊಲೀಸ್ ನಿಯಂತ್ರಣ ಕೇಂದ್ರಕ್ಕೆ (BTP Control Centre), ಭಾರತೀಯ ವಿಜ್ಞಾನ ಸಂಸ್ಥೆ (IISc) ಗೆ ಭೇಟಿ ನೀಡಲಿದ್ದಾರೆ. ನಂತರ ಬೆಂಗಳೂರಿನ ಉದ್ಯಮಿಗಳೊಂದಿಗೆ ಹೋಟೆಲ್ ಫೋರ್ ಸೀಸನ್ಸ್‌ನಲ್ಲಿ ಮಧ್ಯಾಹ್ನದ ಭೋಜನ ಸಭೆ ನಡೆಸಿ, ಕೆಂಪೇಗೌಡ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಪ್ರಯಾಣಿಸಲಿದ್ದಾರೆ.

