ಹಾಸನ: ಕುಟುಂಬದ ಸದಸ್ಯರೇ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆ. ಮತ್ತೆ ಅವರನ್ನು ಆಯ್ಕೆ ಮಾಡಿದರೆ ನಿಮಗೆ ಅಪಕೀರ್ತಿ ಬರುತ್ತದೆ ಎಂದು ಹಾಸನದಲ್ಲಿ ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಅವರು ಹೇಳಿದ್ದಾರೆ.
ಹಾಸನದ ಖಾಸಗಿ ಕಾಲೇಜಿನಲ್ಲಿ ನಡೆದ ಜನಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು, ಎಂಎಲ್‍ಸಿ ಚುನಾವಣೆಯಲ್ಲಿ ಹಾಸನ ಕ್ಷೇತ್ರಕ್ಕೆ ಜೆಡಿಎಸ್‍ನಿಂದ ದೇವೇಗೌಡರ ಮೊಮ್ಮಗ ಸೂರಜ್ ರೇವಣ್ಣ ಅವರಿಗೆ ಟಿಕೆಟ್ ನೀಡಿರುವುದರ ಬಗ್ಗೆ ಕುಟುಂಬ ರಾಜಕಾರಣ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ನವಜೋತ್ ಸಿಧುರನ್ನು ತರಾಟೆಗೆ ತೆಗೆದುಕೊಂಡ ಗೌತಮ್ ಗಂಭೀರ್
Advertisement
ಜನಸ್ವರಾಜ್ ಸಮಾವೇಶ ನವೆಂಬರ್ 21, 2021, ಭಾನುವಾರ #ಜನಸ್ವರಾಜ್ #janswaraj pic.twitter.com/P3EsO8Dngk
— Sadananda Gowda (@DVSadanandGowda) November 21, 2021
Advertisement
ಜೆಡಿಎಸ್ ಅಧಿಪತನ ಶುರುವಾಗಿದೆ. ಜೆಡಿಎಸ್‍ನ ಶಾಸಕರೇ ತಮ್ಮ ಪಕ್ಷದ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಶ್ರವಣಬೆಳಗೊಳ ಮತ್ತು ಹೊಳೆನರಸೀಪುರ ಬಿಟ್ಟರೆ ಜಿಲ್ಲೆಯ ಎಲ್ಲಾ ಕಡೆಯೂ ಬಿಜೆಪಿ ಅಲೆ ಇದೆ ಎಂದು ಸದಾನಂದಗೌಡ ಹೇಳಿದ್ದಾರೆ. ಇದನ್ನೂ ಓದಿ: ಪಾಕ್ ಪ್ರಧಾನಿ ಇಮ್ರಾನ್ ಖಾನ್ ನನ್ನ ದೊಡ್ಡಣ್ಣ – ಮತ್ತೆ ವಿವಾದ ಸೃಷ್ಟಿಸಿದ ನವಜೋತ್ ಸಿಂಗ್
Advertisement