– ಸಿದ್ದರಾಮಯ್ಯನವರ ಸಹ ತಲೆ ತಿರುಗುತ್ತಿದೆ
ಮಡಿಕೇರಿ: ಕಾಂಗ್ರೆಸ್ ಹಡಗು ಸಮುದ್ರದ ಮಧ್ಯದಲ್ಲಿ ಸಿಲುಕಿ ಗಿರಗಿರನೇ ತಿರುಗುತ್ತಿದೆ. ಹೀಗಾಗಿ ಸಿದ್ದರಾಯಮ್ಮನವರ ತಲೆ ತಿರುಗುತ್ತಿದೆ ಎಂದು ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
Advertisement
ಕೊಡಗು ಜಿಲ್ಲೆಯ ಕುಶಾಲನಗರಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಖಾತೆಗಳ ಕ್ಯಾತೆಯಿಂದಾಗಿ ಬೊಮ್ಮಾಯಿ ಅವರ ಸರ್ಕಾರ ಹೆಚ್ಚುದಿನ ಉಳಿಯುವುದಿಲ್ಲ ಎಂದಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯನವರಿಗೆ ಗೂಟದ ಕಾರು ಬೇಕಾಗಿತ್ತು. ಇದಕ್ಕಿಂತ ದೊಡ್ಡ ಹುದ್ದೆ ಸಿಗುವುದಿಲ್ಲ ಎಂಬುದು ಸಿದ್ದರಾಮಯ್ಯನವರಿಗೆ ಗೊತ್ತಾಗಿತ್ತು. ಹೀಗಾಗಿ ಅವರ ಮನಸ್ಸಿನಲ್ಲಿದ್ದ ಕೆಲಸಗಳೆಲ್ಲವೂ ಈಡೇರುತ್ತಿದ್ದಂತೆ ಕುಮಾರಸ್ವಾಮಿ ಅವರ ರಾಜೀನಾಮೆ ಕೊಡಿಸಿದರು ಎಂದರು.
Advertisement
Advertisement
ಕಾಂಗ್ರೆಸ್ ಮತ್ತು ಜೆಡಿಎಸ್ ನಲ್ಲಿ ಅಸಮಾಧಾನಗೊಂಡವರೆಲ್ಲ ರಾಜೀನಾಮೆ ನೀಡಿ, ಬಿಜೆಪಿಗೆ ಬಂದು ಸಪೋರ್ಟ್ ಮಾಡಿದರು. ಆದರೆ ಬೊಮ್ಮಾಯಿ ಅವರ ಸರ್ಕಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಖಾತೆ ವಿಚಾರಕ್ಕೆ ಮುನಿಸು ಇದ್ದಿದ್ದೆಲ್ಲವೂ ಸರಿಯಾಗಿದೆ. ಹೀಗಾಗಿ ಸರ್ಕಾರ ಅವಧಿಯನ್ನು ಪೂರ್ಣಗೊಳಿಸುತ್ತದೆ. ದಕ್ಷಿಣ ಭಾರತದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಅದನ್ನು ಮತ್ತಷ್ಟು ಬಲಗೊಳಿಸುವ ಕೆಲಸವಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಬೆಲೆ ಏರಿಕೆಗೆ ಬಿಜೆಪಿ ಕಾರ್ಯಕರ್ತನಿಂದಲೇ ಆಕ್ರೋಶ- ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
Advertisement
ಕಾನೂನಿನ ನಿಜ ಸ್ವರೂಪ ಗೊತ್ತಾಗಲಿ
ಸ್ಯಾಂಡಲ್‍ವುಡ್ ನಟಿಯಾರದ ಸಂಜನಾ ಗರ್ಲಾನಿ ಮತ್ತು ರಾಗಿಣಿ ದ್ವಿವೇದಿ ಡ್ರಗ್ಸ್ ಪ್ರಕರಣದಲ್ಲಿ ಕಾನೂನು ತನ್ನ ನಿಜ ಸ್ವರೂಪ ಏನೆಂದು ತೋರಿಸಲಿ. ಕೋರ್ಟ್ ಯಾವ ಸೆಕ್ಷನ್ ಗಳ ಮೇಲೆ ಕ್ರಮ ಕೈಗೊಳ್ಳುವುದೋ ಕೈಗೊಳ್ಳಲಿ. ಇದರಿಂದ ಉಳಿದವರಿಗೂ ಒಂದು ಎಚ್ಚರಿಕೆ ಗಂಟೆಯಾಗುತ್ತದೆ. ಡ್ರಗ್ಸ್ ಜಾಲದಲ್ಲಿ ಸಿಲುಕಿದರೆ ಎಂತಹ ಶಿಕ್ಷೆ ಆಗುತ್ತದೆ ಎನ್ನುವ ಅರಿವು ಮೂಡಲಿ. ಹೀಗಾಗಿ ಕಾನೂನು ಸರಿಯಾದ ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸಿದ್ದಾರೆ.
ಡ್ರಗ್ಸ್ ದಂಧೆ ಸಾಮಾಜಿಕ ಪಿಡುಗಾಗಿ ಮಾರ್ಪಟ್ಟಿದೆ. ಯುವಶಕ್ತಿ ದೇಶದ ಅಭಿವೃದ್ಧಿಗೆ ಬಳಕೆಯಾಗಬೇಕು ಎನ್ನೋದು ಪ್ರಧಾನಿ ಮೋದಿಯವರ ಆಶಯವಾಗಿತ್ತು. ಆದರೆ ಈ ರೀತಿ ತಪ್ಪು ದಾರಿಗಳನ್ನು ಹಿಡಿಯುತ್ತಿರುವುದು ಸರಿಯಲ್ಲ. ಇಂದು ಆಫ್ರಿಕನ್ ಪ್ರಜೆಗಳು ದೊಡ್ಡ ಪ್ರಮಾಣದಲ್ಲಿ ಭಾರತಕ್ಕೆ ಡ್ರಗ್ಸ್ ಸಾಗಾಟ ಮಾಡುತ್ತಿದ್ದಾರೆ. ಸರಿಯಾದ ಕಾನೂನು ಕ್ರಮ ಕೈಗೊಂಡರೆ ಯುವ ಸಮೂಹಕ್ಕೂ ಅರಿವು ಮೂಡಿದಂತೆ ಆಗುತ್ತದೆ ಎಂದು ಸದಾನಂದಗೌಡ ಹೇಳಿದ್ದಾರೆ.