ಬೆಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಪರೋಕ್ಷವಾಗಿ ದೇಶದ್ರೋಹಿ ಎಂದು ಕರೆದಿದ್ದಾರೆ. ಅವರ ಹೇಳಿಕೆ ಬಗ್ಗೆ ಭಾರೀ ಟೀಕೆ ವ್ಯಕ್ತವಾಗಿದೆ.
ನಗರದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಯಾರೋ ಕುಳಿತುಕೊಂಡು ಟ್ವೀಟ್ ಮಾಡುತ್ತಾರೆ. ಮಂತ್ರಿಗಿರಿ ಭಿಕ್ಷೆ ಅಂತ ನಮಗೆ ಹೇಳುವವರು, ಚಪ್ಪಾಳೆ ಗಿಟ್ಟಿಸಿಕೊಂಡು ದೇಶ ಕಟ್ಟುವವರು ಎಂದು ಹೇಳಿಕೊಳ್ಳುವವರು. ಈ ರೀತಿಯ ಮಾತುಗಳು ಸರಿಯಲ್ಲ. ಹಾರಿಕೆ ಸುದ್ದಿ ಹರಡುವವರು ದೇಶ ದ್ರೋಹಿಗಳು ಎಂದು ಗಾಂಧೀಜಿ ಹೇಳಿದ್ದಾರೆ. ಇವರೆಲ್ಲಾ ಅದೇ ಬ್ರಾಂಡ್ಗೆ ಸೇರುತ್ತಾರೆ. ಭಾಷಣಗಳಿಂದ, ಟ್ವೀಟ್ನಿಂದ ಜನರನ್ನು ಪ್ರಚೋದನೆ ಮಾಡುವುದಲ್ಲ. ಇಂತಹ ಮಾತುಗಳು ಹಾಗೂ ಜನರ ಬಗ್ಗೆ ಬಹಳ ನೋವಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಮೋದಿ ಅಮೆರಿಕಗೆ ಹೋದ್ರೆ ಇಲ್ಲಿ ಯಾರೂ ಊಟ, ತಿಂಡಿ ಮಾಡಲ್ವಾ – ಸಂಸದರಿಗೆ ಸೂಲಿಬೆಲೆ ಪ್ರಶ್ನೆ
https://twitter.com/Shankar_MD555/status/1179360924890734594
ಕೇಂದ್ರ ಸರ್ಕಾರದಿಂದ ನೆರೆ ಪರಿಹಾರ ಬಿಡುಗಡೆ ವಿಚಾರವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವರು, ಗುರುವಾರ ಕ್ಯಾಬಿನೆಟ್ ಸಭೆ ಇದೆ. ನಾನು ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಇಬ್ಬರು ಸೇರಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ, ರಾಜ್ಯಕ್ಕೆ ಆದಷ್ಟು ಬೇಗ ನೆರೆ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಳ್ಳುತ್ತೇವೆ ಎಂದರು.
ಈ ಹಿಂದೆ ನೆರೆ ಪರಿಹಾರದ ಹಣ ಹೇಗೆ ದುರುಪಯೋಗ ಆಗುತ್ತಿತ್ತು ಅಂತ ಗೊತ್ತಿದೆ. ಇದನ್ನು ಸಾಮಾನ್ಯ ಜನರು ಅರ್ಥ ಮಾಡಿಕೊಳ್ಳಬೇಕು. ಈಗಾಗಲೇ ಎನ್ಡಿಆರ್ ಎಫ್ ಫಂಡ್ ಬಿಡುಗಡೆ ಮಾಡಲಾಗಿದೆ. ಮಂಗಳವಾರ ಸಹೃದಯದಿಂದ ಬಿಹಾರ ನೆರೆ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಆದರೆ ಅದನ್ನೇ ದೊಡ್ಡ ವಿಷಯ ಮಾಡುವ ಪ್ರಯತ್ನವನ್ನು ಕೆಲವರು ಮಾಡಿದ್ದಾರೆ ಎಂದು ಅಸಮಾಧಾನ ಹೊರ ಹಾಕಿದರು. ಇದನ್ನೂ ಓದಿ: ಪ್ರಧಾನಿ ಅಮೆರಿಕಕ್ಕೆ ಹೋಗಿದ್ದರಿಂದ ನೆರೆ ಪರಿಹಾರ ಪ್ರಕಟಿಸಲು ತಡವಾಗಿದೆ – ಪ್ರಹ್ಲಾದ್ ಜೋಷಿ
ಕೇಂದ್ರ ತಂಡವು ಬಂದು ನೆರೆ ಪೀಡಿತ ಪ್ರದೇಶಗಳ ಪರಿಶೀಲನೆ ಮಾಡಿದೆ. ಮಳೆ ನಿಲ್ಲದೇ ಮನೆ ಕಟ್ಟಲು ಸಾಧ್ಯವಾಗುತ್ತಾ? ಹಿಂದೆಲ್ಲಾ ದುಡ್ಡು ನುಂಗಿ ಹಾಕುವವರೇ ಜಾಸ್ತಿ ಇದ್ದರು. ಹಣ ತರಬೇಕು, ಇಲ್ಲಿ ಅದನ್ನು ಕೊಳ್ಳೆ ಹೊಡೆಯಬೇಕು ಅಂತ ಕಾಯುತ್ತಿದ್ದರು. ಈ ಬಾರಿ ಅದಕ್ಕೆ ಅವಕಾಶ ಇಲ್ಲ. ಸಂತ್ರಸ್ತರಿಗೆ ಆದಷ್ಟು ಬೇಗ ಪರಿಹಾರ ಕೊಡುವ ಕೆಲಸ ರಾಜ್ಯ ಮತ್ತು ಕೇಂದ್ರ ಸರ್ಕಾರ ಮಾಡಲಿವೆ ಎಂದು ಹೇಳಿದರು. ಇದನ್ನೂ ಓದಿ: ಯಾರೂ ಕಿಸೆಯಿಂದ ಪರಿಹಾರ ಕೊಡಲು ಆಗಲ್ಲ: ಪ್ರತಾಪ್ ಸಿಂಹ
ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನ ವಿಚಾರವಾಗಿ ಮಾಧ್ಯಮಗಳು ಪ್ರಶ್ನೆ ಕೇಳುತ್ತಿದ್ದಂತೆ ಕೇಂದ್ರ ಸಚಿವರು, ಎಲ್ಲರಿಗೂ ಆಯ್ತಲ್ಲಾ, ಮತ್ತೆ ಅವರಿಗೆ ಏನು ಸ್ಪೆಷಲ್ ಎಂದು ಗುಡುಗಿದರು. ಇದನ್ನೂ ಓದಿ: ಸಿಂಹಗೆ ಮೋದಿ ದೇವ್ರು ಇರ್ಬೋದು, ಬೇಕಾದ್ರೆ ಪೂಜೆ ಮಾಡ್ಲಿ – ಆದ್ರೆ ಮೊದ್ಲು ಪರಿಹಾರ ಕೊಡ್ಲಿ: ಕಾಂಗ್ರೆಸ್ ಕಿಡಿ
https://www.youtube.com/watch?v=wK2ID6Ip5MQ