ಮಹಾನ್ ವ್ಯಕ್ತಿ, ತುಂಬಾ ಜನ ಹುಟ್ತಾರೆ ಸಾಯ್ತಾರೆ. ಆದರೆ, ಈ ಬದುಕಿನ ಅವಕಾಶವನ್ನು ಹೇಗೆ ಬಳಸಿಕೊಳ್ಳಬೇಕು ಎನ್ನುವುದನ್ನು ದ್ವಾರಕೀಶ್ (Dwarakish) ಅವರಿಂದ ಕಲಿತುಕೊಳ್ಳಬೇಕು. ಅವರ ಯಾವಾಗಲೂ ಸ್ಫೂರ್ತಿ ಆಗಿದ್ದರು. ಕನ್ನಡ ಚಿತ್ರರಂಗ ಇರೋವರೆಗೂ ಅವರ ಸೇವೆಯನ್ನು ಮರೆಯೋಲ್ಲ. ಅವರ ಕುಟುಂಬಕ್ಕೆ ಈ ದುಖಃವನ್ನು ತೆಡೆದುಕೊಳ್ಳುವ ಶಕ್ತಿ ನೀಡಲಿ ಎಂದು ನಟ ಯಶ್ (Yash) ಹೇಳಿದರು. ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದು ಅವರು ಮಾತನಾಡಿದರು.
- Advertisement -
ಹಿರಿಯ ನಟ ದ್ವಾರಕೀಶ್ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವದೊಂದಿಗೆ ನೆರವೇರಿಸುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ರಾಜ್ಯ ಸರಕಾರವು ತೀವ್ರ ಸಂತಾಪ ಸೂಚಿಸಿದ್ದು, ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಬೇಕು ಎಂದು ಪೊಲೀಸ್ ಮಹಾ ನಿರ್ದೇಶಕರಿಗೆ ಅಧಿಸೂಚನೆ ಹೊರಡಿಸಿದೆ.
- Advertisement -
- Advertisement -
ಇಂದು ಮಧ್ಯಾಹ್ನ 11.30 ರಿಂದ 12.30ರ ಒಳಗೆ ಅಂತ್ಯಕ್ರಿಯೆ ನಡೆಯಲಿದ್ದು, ಟಿ ಆರ್ ಮಿಲ್ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬ್ರಾಹ್ಮಣ ವಿಧಿವಿಧಾನದ ಪ್ರಕಾರ ಅಂತ್ಯಕ್ರಿಯೆ ನಡೆಯಲಿದ್ದು, ಮೊದಲಿಗೆ ಪ್ರೇತ ಸಂಸ್ಕಾರ. ಆನಂತರ ಕಿವಿಯಲ್ಲಿ ನಾರಾಯಣ ಸ್ಮರಣೆ. ಚಿತಾ ಅಗ್ನಿ ಹೋಮದ ನಂತರ ಚಿತಾ ಶುದ್ಧಿ , ಭೂ ಸ್ಪರ್ಶ ದಹನ ಮಾಡಿ, ಆಮೇಲೆ ಅಗ್ನಿ ದಿಗ್ಬಂಧನ ಮಾಡಲಾಗುತ್ತಿದೆ. ಕೊನೆಯಲ್ಲಿ ಹಿರಿ ಮಗನಿಂದ ಅಗ್ನಿ ಸ್ಪರ್ಶ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.
- Advertisement -
ಬೆಳಗ್ಗೆ ಎಂಟು ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 7 ಗಂಟೆಗೆ ಮನೆಯಲ್ಲಿ ಕಾರ್ಯಗಳು ನಡೆದಿವೆ. ಮನೆಯಿಂದ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ಥೀವ ಶರೀರವನ್ನು ತರಲಾಗಿದ್ದು, ಅಭಿಮಾನಿಗಳು ಮತ್ತು ಕಲಾವಿದರು ಆಗಮಿಸಿ, ಅಂತಿಮ ದರ್ಶನ ಪಡೆಯುತ್ತಿದ್ದಾರೆ.