ಕನ್ನಡಕ್ಕೆ ಮತ್ತು ಕನ್ನಡ ಸಿನಿಮಾ ರಂಗಕ್ಕೆ ದ್ವಾರಕೀಶ್ (Dwaarkish) ಅವರು ಅಪಾರ ಸೇವೆ ಸಲ್ಲಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ದ್ವಾರಕೀಶ್ ಅವರಿಗೆ ಅಂತಿಮ ನಮನ ಸಲ್ಲಿಸಿ ಮಾತನಾಡಿದ ಅವರು, ದ್ವಾರಕೀಶ್ ಬಹಳಷ್ಟು ಏಳುಬೀಳುಗಳನ್ನ ಕಂಡಿದ್ದರು. ಎಷ್ಟೇ ಕಷ್ಟಬಂದರು ಸಹಿಸಿಕೊಂಡು ಕನ್ನಡಕ್ಕೆ ಅಪಾರ ಕೊಡುಗೆ ಕೊಟ್ಟಿದ್ದಾರೆ. ಹೆಚ್ಚಾಗಿ ಅವರು ಸಹ ಮೈಸೂರಿನವರು. ಅನೇಕ ವಿಚಾರಗಳನ್ನ ಅವರೊಂದಿಗೆ ಚರ್ಚೆ ಮಾಡಿದ್ದೆ. ಕನ್ನಡ ಸೇವೆ ಮಾಡಿದ ಅಪರೂಪ ನಟ. ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ದೃಷ್ಟಿ ಕೊಡುವಂತವ ಕೆಲಸ ಮಾಡಿರೋದು ಶ್ಲಾಘನೀಯ. ಕನ್ನಡ ಚಿತ್ರರಂಗ ಅವರ ಸಾವಿನಿಂದ ಬಹಳ ಬಡವಾಯಿತು. ಒಬ್ಬ ಕನ್ನಡ ಪ್ರೇಮಿ ಕಳೆದುಕೊಂಡಿದ್ದೇವೆ. ಅವರ ಧರ್ಮಪತ್ನಿ ಕಾಲವಾದ ದಿನವೇ ಅವರು ಕಾಲವಾಗಿದ್ದಾರೆ ಎಂದಿದ್ದಾರೆ.
Advertisement
ಹಿರಿಯ ನಟ ದ್ವಾರಕೀಶ್ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವದೊಂದಿಗೆ ನೆರವೇರಿಸುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ರಾಜ್ಯ ಸರಕಾರವು ತೀವ್ರ ಸಂತಾಪ ಸೂಚಿಸಿದ್ದು, ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಬೇಕು ಎಂದು ಪೊಲೀಸ್ ಮಹಾ ನಿರ್ದೇಶಕರಿಗೆ ಅಧಿಸೂಚನೆ ಹೊರಡಿಸಿದೆ.
Advertisement
Advertisement
ಇಂದು ಮಧ್ಯಾಹ್ನ 11.30 ರಿಂದ 12.30ರ ಒಳಗೆ ಅಂತ್ಯಕ್ರಿಯೆ ನಡೆಯಲಿದ್ದು, ಟಿ ಆರ್ ಮಿಲ್ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬ್ರಾಹ್ಮಣ ವಿಧಿವಿಧಾನದ ಪ್ರಕಾರ ಅಂತ್ಯಕ್ರಿಯೆ ನಡೆಯಲಿದ್ದು, ಮೊದಲಿಗೆ ಪ್ರೇತ ಸಂಸ್ಕಾರ. ಆನಂತರ ಕಿವಿಯಲ್ಲಿ ನಾರಾಯಣ ಸ್ಮರಣೆ. ಚಿತಾ ಅಗ್ನಿ ಹೋಮದ ನಂತರ ಚಿತಾ ಶುದ್ಧಿ , ಭೂ ಸ್ಪರ್ಶ ದಹನ ಮಾಡಿ, ಆಮೇಲೆ ಅಗ್ನಿ ದಿಗ್ಬಂಧನ ಮಾಡಲಾಗುತ್ತಿದೆ. ಕೊನೆಯಲ್ಲಿ ಹಿರಿ ಮಗನಿಂದ ಅಗ್ನಿ ಸ್ಪರ್ಶ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.
Advertisement
ಬೆಳಗ್ಗೆ ಎಂಟು ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 7 ಗಂಟೆಗೆ ಮನೆಯಲ್ಲಿ ಕಾರ್ಯಗಳು ನಡೆದಿವೆ. ಮನೆಯಿಂದ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ಥೀವ ಶರೀರವನ್ನು ತರಲಾಗಿದ್ದು, ಅಭಿಮಾನಿಗಳು ಮತ್ತು ಕಲಾವಿದರು ಆಗಮಿಸಿ, ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ದ್ವಾರಕೀಶ್ ಅವರ ಒಡನಾಟದ ಕುರಿತು ಅನೇಕರು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಳ್ಳುತ್ತಿದ್ದು, ದ್ವಾರಕೀಶ್ ಅವರ ನಿಧನಕ್ಕೆ ಹಿರಿಯ ನಿರ್ದೇಶಕ ಭಾರ್ಗವ್ ಕೂಡ ಸಂತಾಪ ಸೂಚಿಸಿದ್ದಾರೆ. ದ್ವಾರಕೀಶ್ ಅವರ ಸಂಬಂಧಿಯೂ ಆಗಿರುವ ಭಾರ್ಗವ್, ಅಗಲಿದ ದ್ವಾರಕೀಶ್ ಅವರನ್ನು ನೆನಪಿಸಿಕೊಂಡಿದ್ದು ಹೀಗೆ, ನಾನು ಮತ್ತು ದ್ವಾರಕೀಶ್ ಬಾಲ್ಯದ ಸ್ನೇಹಿತರು. ಸ್ಕೂಲ್ ಕಾಲೇಜು ಶಿಕ್ಷಣ ಒಟ್ಟಿಗೆ ಕಲಿತಿದ್ದೇವೆ. ಕಾಲೇಜು ದಿನಗಳಿಂದಾನೇ ದ್ವಾರಕೀಶ್ ಗೆ ನಟನಾ ಆಸಕ್ತಿ. ಅವ್ರ ಅಣ್ಣ ಮೈಸೂರಲ್ಲಿ ಅಂಗಡಿ ಹಾಕಿ ಕೊಟ್ಟಿದ್ರು. ಅಂಗಡಿ ಬಿಟ್ಟು ಬೆಂಗಳೂರಿಗೆ ನಟ ಆಗೋಕೆ ಬಂದ್ರು. ಚಿತ್ರರಂಗದಲ್ಲಿ 50ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಿಸಿದ್ದಾರೆ. ನನ್ಗೆ ಅವ್ನು ಅನ್ನದಾತ ಅವ್ನಿಂದ್ಲೇ ನಾನು ಚಿತ್ರರಂಗಕ್ಕೆ ಬಂದೆ . ದ್ವಾರಕೀಶ್ ನನ್ ಗುರು ಅನ್ನದಾತ ಎಂದು ಭಾರ್ಗವ್ ಭಾವುಕ ಮಾತುಗಳನ್ನು ಆಡಿದ್ದಾರೆ.