ದುಬೈ: ಟಿ20 ವಿಶ್ವಕಪ್ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳುವುದಾಗಿ ವೆಸ್ಟ್ ಇಂಡೀಸ್ ಆಲ್‌ರೌಂಡರ್ ಡ್ವೇನ್ ಬ್ರಾವೋ ಘೋಷಿಸಿದ್ದಾರೆ.
Advertisement
ಶ್ರೀಲಂಕಾ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ ಸೋಲನುಭವಿಸಿದ ವೆಸ್ಟ್ ಇಂಡೀಸ್ ತಂಡ ಸೆಮಿಫೈನಲ್‌ನಿಂದ ಹೊರಬಿದ್ದಿದೆ. ಇದನ್ನೂ ಓದಿ: ಟೀಂ ಇಂಡಿಯಾ ಸೆಮಿಫೈನಲ್ ಕನಸು ನನಸಾಗಲು ಇದೊಂದೇ ಮಾರ್ಗ
Advertisement
ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ರಾವೋ, ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಲು ಇದು ಸೂಕ್ತ ಸಮಯ ಎಂದೆನಿಸಿದೆ. ನಾನು ಉತ್ತಮ ವೃತ್ತಿ ಜೀವನ ಹೊಂದಿದ್ದೇನೆ. 18 ವರ್ಷಗಳ ಕಾಲ ವೆಸ್ಟ್ ಇಂಡೀಸ್ ತಂಡವನ್ನು ಪ್ರತಿನಿಧಿಸಿದ ಸಂದರ್ಭದಲ್ಲಿ ಹಲವಾರು ಏಳು ಬೀಳುಗಳನ್ನು ಕಂಡಿದ್ದೇನೆ. ಇದನ್ನೂ ಓದಿ: ಅಮೆರಿಕಾದಲ್ಲಿ ಲಕ್ಷ್ಮೀ ಪೂಜೆ ಮಾಡಿದ ಚೋಪ್ರಾ-ನಿಕ್
Advertisement
Advertisement
2006ರಲ್ಲಿ ಬ್ರಾವೋ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಈವರೆಗೆ 90 ಪಂದ್ಯಗಳನ್ನು ಆಡಿದ್ದಾರೆ. ಬ್ರಾವೋ 2018ರಲ್ಲೂ ನಿವೃತ್ತಿ ಘೋಷಿಸಿದ್ದರು. ಆದರೆ 2019ರಲ್ಲಿ ನಿವೃತ್ತಿ ವಾಪಸ್ ಪಡೆದು ತಂಡಕ್ಕೆ ಮರಳಿದ್ದರು. 2012, 2016ರ ಟಿ20 ವಿಶ್ವಕಪ್ ಗೆದ್ದ ವೆಸ್ಟ್ ಇಂಡೀಸ್ ತಂಡದಲ್ಲಿ ಬ್ರಾವೋ ಪ್ರಮುಖ ಪಾತ್ರ ವಹಿಸಿದ್ದರು.