ಮುಂಬೈ: ಹಿರಿಯ ಕಾಂಗ್ರೆಸ್ (Congress) ನಾಯಕ, ಪದ್ಮಶ್ರೀ ಪ್ರಶಸ್ತಿ ವಿಜೇತ ಮತ್ತು ಮಾಜಿ ರಾಜ್ಯಪಾಲ ಡಿ.ವೈ ಪಾಟೀಲ್ (DY Patil) ಅವರಿಂದು (ಆ.4) ಕೊನೆಯುಸಿರೆಳೆದಿದ್ದಾರೆ
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ತಮ್ಮ ಪುತ್ರರಾದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಸತೇಜ್ ಪಾಟೀಲ್, ಸಂಜಯ್ ಪಾಟೀಲ್ ಮತ್ತು ಅಜಿಂಕ್ಯ ಪಾಟೀಲ್ ಅವರನ್ನು ಅಗಲಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಸರ್ಕಾರದಲ್ಲಿ ತೀವ್ರ ಬಿಕ್ಕಟ್ಟು: ಬೀದಿಗೆ ಬಂತು ನಖ್ವಿ-ಶಹಬಾಸ್ ಶರೀಫ್ ಭಿನ್ನಾಭಿಪ್ರಾಯ
ಮಹಾರಾಷ್ಟ್ರದ ಕೊಲ್ಹಾಪುರ ಮೂಲದವರಾದ ಡಿ.ವೈ ಪಾಟೀಲ್ ಅವರು ರಾಜ್ಯದಲ್ಲಿ ಹಲವಾರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ್ದು, 1967ರಿಂದ 1978ರವರೆಗೆ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ನಂತರ ಡಿ.ವೈ ಪಾಟೀಲ್ ವಿಶ್ವವಿದ್ಯಾಲಯವನ್ನು ಸ್ಥಾಪಿಸಿ, ಈ ಮೂಲಕ ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ಹಲವು ವಿಭಾಗಗಳಲ್ಲಿ ಕೋರ್ಸ್ಗಳನ್ನು ನೀಡುವಲ್ಲಿ ಸಹಕಾರಿಯಾದರು.
ರಾಜ್ಯಪಾಲರಾಗಿ ತ್ರಿಪುರ, ಪಶ್ಚಿಮ ಬಂಗಾಳ, ಬಿಹಾರ ರಾಜ್ಯಗಳಿಗೆ ಸೇವೆ ಸಲ್ಲಿಸಿದ್ದು, ಪಶ್ಚಿಮ ಬಂಗಾಳದ ಹೆಚ್ಚುವರಿ ಜವಾಬ್ದಾರಿಯನ್ನೂ ಸಹ ವಹಿಸಿಕೊಂಡಿದ್ದರು.ಇದನ್ನೂ ಓದಿ: ನೊಣವಿನಕೆರೆ ಕಾಡಸಿದ್ದೇಶ್ವರ ಮಠಕ್ಕೆ ನೂತನ ಸಚಿವ ವಿಜಯಾನಂದ ಕಾಶಪ್ಪನವರ್ ಭೇಟಿ
