Sunday, 19th May 2019

ಮಂಜೇಶ್ವರದಲ್ಲಿ ಡಿವೈಎಫ್‍ಐ ಕಾರ್ಯಕರ್ತನ ಬರ್ಬರ ಕೊಲೆ

ಮಂಗಳೂರು: ಡಿವೈಎಫ್‍ಐ ಕಾರ್ಯಕರ್ತನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕರ್ನಾಟಕ ಗಡಿಭಾಗ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರದಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಪ್ರದೇಶ ಮಂಜೇಶ್ವರದ ಬಾಯಾರು ಬಳಿಯ ಸೋಂಕಾಲಿನಲ್ಲಿ ಈ ಘಟನೆ ನಡೆದಿದೆ. ಅಬೂಬಕ್ಕರ್ ಸಿದ್ದಿಕ್(21) ಕೊಲೆಯಾದ ಯುವಕ. ಎರಡು ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.

ಕೊಲ್ಲಿ ರಾಷ್ಟ್ರದ ಕತಾರಿನಲ್ಲಿ ಉದ್ಯೋಗದಲ್ಲಿದ್ದ ಅಬೂಬಕ್ಕರ್ ಸಿದ್ದಿಕ್, ಹತ್ತು ದಿನಗಳ ಹಿಂದೆ ಊರಿಗೆ ಬಂದಿದ್ದನು. ಭಾನುವಾರ ರಾತ್ರಿ 11.30ರ ಸುಮಾರಿಗೆ ಬೈಕಿನಲ್ಲಿ ಸೋಂಕಾಲಿನ ಮನೆಗೆ ಮರಳುತ್ತಿದ್ದಾಗ ಅಡ್ಡಗಟ್ಟಿ ಕೊಲೆ ಮಾಡಲಾಗಿದೆ.

ಸಿದ್ದಿಕ್ ಡಿವೈಎಫ್‍ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದನು. ಹೀಗಾಗಿ ಈ ಘಟನೆ ಖಂಡಿಸಿ ಡಿವೈಎಫ್‍ಐ ಮತ್ತು ಸಿಪಿಎಂ ಮಂಜೇಶ್ವರ ವ್ಯಾಪ್ತಿಯಲ್ಲಿ ಹರತಾಳಕ್ಕೆ ಕರೆ ನೀಡಿದ್ದು, ವಾಹನ ಸಂಚಾರ ಬಂದ್ ಮಾಡಲಾಗಿದೆ. ಗಡಿಭಾಗ ಆಗಿರುವುದರಿಂದ ಅಲ್ಲಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

Leave a Reply

Your email address will not be published. Required fields are marked *