ತಿರುವನಂತಪುರಂ: ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‍ಐ) ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ಮತ್ತು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್)ನ 29 ಕಾರ್ಯಕರ್ತರ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಮತ್ತು ಎಸ್‍ಡಿಪಿಐನ ಐವರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
Advertisement
ಬುಧವಾರ ರಾತ್ರಿ ಕೇರಳದ ಕೋಝಿಕ್ಕೋಡ್‍ನಲ್ಲಿ ಸುಮಾರು 30 ಐಯುಎಂಎಲ್ ಮತ್ತು ಎಸ್‍ಡಿಪಿಐ ಕಾರ್ಯಕರ್ತರು ಡಿವೈಎಫ್‍ಐ ಕಾರ್ಯಕರ್ತರಾಗಿರುವ ಜಿಷ್ಣು ರಾಜ್ ಮೇಲೆ ಹಲ್ಲೆ ನಡೆಸಿದ್ದರು. ಎಸ್‍ಡಿಪಿಐ ಪೋಸ್ಟರ್ ಹರಿದ ಹಿನ್ನೆಲೆ ಜಿಷ್ಣು ರಾಜ್ ಮೇಲೆ ಹಲ್ಲೆ ನಡೆಸಲಾಗಿತ್ತು ಎನ್ನಲಾಗಿದೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ದ್ರೌಪದಿ ಮುರ್ಮು
Advertisement
ಘಟನೆಯಲ್ಲಿ ಗಾಯಗೊಂಡ ಜಿಷ್ಣು ರಾಜ್ ಸದ್ಯ ಕೋಯಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಕಣ್ಣು ಮತ್ತು ಮುಖಕ್ಕೆ ಗಂಭೀರವಾಗಿ ಪೆಟ್ಟಾಗಿದೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ನಾಯಕರ ಸೂಚನೆಯ ಮೇರೆಗೆ ಫ್ಲೆಕ್ಸ್ ಹರಿದು ಹಾಕಿರುವುದಾಗಿ ಜಿಷ್ಣು ರಾಜ್ ತಪ್ಪೊಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿ ಮಾಡಿದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು – ನಾಳೆ ನಾಮಪತ್ರ ಸಲ್ಲಿಕೆ
Advertisement
Advertisement
ಘಟನೆಯ ನಂತರ ಡಿವೈಎಫ್‍ಐ ಕಾರ್ಯಕರ್ತರು ಕೋಝಿಕ್ಕೋಡ್‍ನ ಬೀದಿಗಳಲ್ಲಿ ಪ್ರತಿಭಟನೆ ನಡೆಸಿ, ಎಸ್‍ಡಿಪಿಐ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಹಿನ್ನೆಲೆ ಐವರು ಎಸ್‍ಡಿಪಿಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಅಲ್ಲದೇ ಹಿಂಸಾಚಾರಕ್ಕೆ ಪ್ರಚೋದನೆ ನೀಡಲು ಯತ್ನಿಸಿದ ಆರೋಪದಡಿ ಜಿಷ್ಣುವಿನ ವಿರುದ್ಧ ಕೂಡ ಪ್ರಕರಣ ದಾಖಲಿಸಿದ್ದಾರೆ.