ರೇವಣ್ಣ ಆರೋಪಕ್ಕೆ ಬೇಸತ್ತು ವರ್ಗಾವಣೆ ಕೋರಿದ ಡಿವೈಎಸ್‌ಪಿ

Public TV
1 Min Read
hd revanna udai bhaskar dysp

– ರಾಜಕಾರಣಿಗಳು ನನ್ನಿಂದ ಕಾನೂನು ಬಾಹಿರ ಕ್ರಮ ಆಪೇಕ್ಷಿಸುತ್ತಿದ್ದಾರೆ

ಹಾಸನ: ಡಿವೈಎಸ್‌ಪಿ ಉದಯ್ ಭಾಸ್ಕರ್ (Uday Bhaskar) ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿ ಅವರ ವಿರುದ್ಧ ಕ್ರಮಕ್ಕೆ ಹೆಚ್‌ಡಿ ರೇವಣ್ಣ (HD Revanna) ಒತ್ತಾಯಿಸಿದ್ದರು. ಇದೀಗ ಡಿವೈಎಸ್‌ಪಿ ಮನನೊಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದು ಸ್ವಯಂ ವರ್ಗಾವಣೆಗೆ (Transfer) ಕೋರಿದ್ದಾರೆ.

ನಾನು ನಿಷ್ಪಕ್ಷಪಾತ, ನೇರ ನುಡಿಯ ವ್ಯಕ್ತಿತ್ವವುಳ್ಳವನು. ರಾಜಕಾರಣಿಗಳು ನನ್ನಿಂದ ಕಾನೂನು ಬಾಹಿರ ಕ್ರಮ ಆಪೇಕ್ಷಿಸುತ್ತಿದ್ದಾರೆ. ಅವರ ಒತ್ತಾಯಗಳಿಗೆ ನಾನು ಮಣಿಯದ ಕಾರಣ ನನ್ನ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಉದಯ್ ಭಾಸ್ಕರ್ ಪರೋಕ್ಷವಾಗಿ ಮಾಜಿ ಸಚಿವ ರೇವಣ್ಣ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮತ್ತೆ ರಾಜ್ಯಕ್ಕೆ ಮೋದಿ – ಕಾಂಗ್ರೆಸ್‌, ಜೆಡಿಎಸ್‌ ಭದ್ರಕೋಟೆಯಲ್ಲೇ ನಡೆಯಲಿದೆ ಸಮಾವೇಶ

hd revanna udai bhaskar dysp 1

ನನ್ನ ಮೇಲೆ ಆರೋಪ ಮಾಡಿ ನನ್ನ ಮೇಲಾಧಿಕಾರಿಗಳಿಗೆ ಮಾನಸಿಕ ಒತ್ತಡಗಳನ್ನು ನೀಡುತ್ತಿದ್ದಾರೆ. ರಾಜಕಾರಣಿಗಳು ಈ ಚುನಾವಣಾ ಸಂದರ್ಭದಲ್ಲಿ ನನಗೆ ಸುಗಮವಾಗಿ ಕೆಲಸ ಮಾಡಲು ಅಡ್ಡಿಪಡಿಸಿ ಗೊಂದಲ ಸೃಷ್ಟಿಪಡಿಸುವುದು ಖಚಿತ. ಇದರಿಂದ ಮೇಲಾಧಿಕಾರಿಗಳಿಗೂ ಇರುಸುಮುರುಸು ಉಂಟಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದೀಗ ಬೇಸರದಿಂದಲೇ ತಮ್ಮ ವರ್ಗಾವಣೆಗೆ ಬೇಡಿಕೆ ಇಟ್ಟಿರುವ ಉದಯ್ ಭಾಸ್ಕರ್, ಚುನಾವಣಾ ಪ್ರಕ್ರಿಯೆ ಮುಗಿಯುವ ತನಕ ನನ್ನನ್ನು ಹಾಸನ ಜಿಲ್ಲೆಯಿಂದ ತಮಗೆ ಸರಿ ಎನಿಸಿದ ಸ್ಥಳಕ್ಕೆ ತಾತ್ಕಾಲಿಕ ವರ್ಗಾವಣೆಗೆ ಕೋರುತ್ತೇನೆ ಎಂದು ಮೇಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಪ್ರಮುಖ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಸಿಗುತ್ತಿಲ್ಲ ಅಭ್ಯರ್ಥಿಗಳು!

Share This Article