– ಎಥೆನಾಲ್ ಮಿಶ್ರಣದ ವಿಚಾರ ಚರ್ಚಿಸೋಣ ಬನ್ನಿ – ಮೋದಿಗೆ ಆಹ್ವಾನ
ನವದೆಹಲಿ: ಕರ್ನಾಟಕದ ಕೆಲವು ಪೆಟ್ರೋಲ್ ಬಂಕ್ಗಳಲ್ಲಿ ಎಥನಾಲ್ (Ethanol) ಬಳಕೆ ಶೇ.20ಕ್ಕೂ ಹೆಚ್ಚು ದಾಟಿರೋ ಅಂಶ ಬಯಲಾಗಿದೆ. ಸಚಿವ ರಿಜ್ವಾನ್ ಅರ್ಷದ್ ದಾಖಲೆ ಸಮೇತ ಮಾಹಿತಿ ಬಹಿರಂಗಪಡಿಸಿದ್ದರು. 7 ಸ್ಯಾಂಪಲ್ಗಳ ಪೈಕಿ 5 ಸ್ಯಾಂಪಲ್ಗಳಲ್ಲಿ ಶೇ.20ಕ್ಕಿಂತ ಹೆಚ್ಚು ಎಥನಾಲ್ ಇದೆ ಅಂತ ವರದಿ ಬಂದಿದೆ. ಮಾದರಿ ಪರೀಕ್ಷೆಗಳಲ್ಲಿ ಎಥನಾಲ್ 31.02% ಇರೋದು ಕೂಡ ಪತ್ತೆಯಾಗಿದೆ. ರಾಜ್ಯದ ಪೆಟ್ರೋಲ್ನಲ್ಲಿ ಶೇ.26ರಿಂದ 31ರಷ್ಟು ಎಥೆನಾಲ್ ಮಿಶ್ರಣ ಆರೋಪಕ್ಕೆ ತೈಲ ಕಂಪನಿಗಳು ಆಕ್ಷೇಪ ವ್ಯಕ್ತಪಡಿಸಿವೆ.
E20 बना 420 – जनता की गाड़ी से पेट्रोल चोरी!
मोदी सरकार कहती है – पेट्रोल में 20% एथेनॉल है। कर्नाटक सरकार ने 7 ज़िलों से पेट्रोल के सैंपल लेकर मान्यता प्राप्त लैब में जाँच करवाई।
नतीजा देखिए
– 14 में से 11 सैंपल में 20% से ज़्यादा एथेनॉल
– IOCL में 31.2%, HPCL में 30.5%
– IOCL, HPCL, BPCL, Nayara, Shell – सरकारी हों या प्राइवेट – सब सीमा से ऊपर
– और कंपनियों की अपनी लैब ने एथेनॉल की मात्रा रिपोर्ट में लिखी ही नहींमतलब आप पैसा महंगे पेट्रोल का दे रहे हैं, टंकी में एथेनॉल भरा जा रहा है। नुकसान किसका? आपका।
आपकी गाड़ी इतना एथेनॉल पचाने के लिए बनी ही नहीं – मतलब, घटता माइलेज, बार-बार मैकेनिक। शौक से ली गई गाड़ी की बर्बादी।
और पंप पर लिखा तक नहीं कि टंकी में क्या डाला जा रहा है – चुनने का कोई विकल्प नहीं।
मोदी जी, बताइए – देश की टंकी में क्या भरा जा रहा है? पेट्रोल में असल में कितना एथेनॉल है? 20% से ज़्यादा मिलावट करने वाली कंपनियों पर कार्रवाई कब होगी?
और डिबेट की चुनौती अब भी खड़ी है। ये मुद्दा भी जोड़ लेंगे – आपकी नीतियों से असल में फ़ायदा किसे हो रहा है?
— Rahul Gandhi (@RahulGandhi) November 7, 2026
ಕೇಂದ್ರ ಸರ್ಕಾರದ ಎಥನಾಲ್ ಮಿಶ್ರಣ ನೀತಿಯನ್ನ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಟೀಕಿಸಿದ್ದಾರೆ. `ಇ20 ಈಗ 420 ಆಗಿದೆ. ಜನರ ವಾಹನಗಳ ಪೆಟ್ರೋಲನ್ನೇ ಕದಿಯಲಾಗುತ್ತಿದೆ ಎಂದು ಲೇವಡಿ ಮಾಡಿ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ದೇಶದ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ನಿಗದಿತ ಶೇ.20ರ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಿತ ಪೆಟ್ರೋಲ್ (Petrol) ಪೂರೈಸುತ್ತಿವೆ. ಕರ್ನಾಟಕದ ಏಳು ಜಿಲ್ಲೆಗಳಿಂದ ಸಂಗ್ರಹಿಸಲಾದ ಪೆಟ್ರೋಲ್ ಮಾದರಿಗಳನ್ನ ಪ್ರಯೋಗಾಲಯದಲ್ಲಿ ಪರೀಕ್ಷಿಸಿದಾಗ ಈ ಅಂಶ ಬೆಳಕಿಗೆ ಬಂದಿದೆ. ಮಾನ್ಯತೆ ಪಡೆದ ಪ್ರಯೋಗಾಲಯದಲ್ಲಿ ಪರೀಕ್ಷಿಸಲಾದ ಒಟ್ಟು 14 ಪೆಟ್ರೋಲ್ ಮಾದರಿಗಳ ಪೈಕಿ 11 ಮಾದರಿಗಳಲ್ಲಿ ಎಥೆನಾಲ್ ಪ್ರಮಾಣ ಶೇ.20ಕ್ಕಿಂತ ಹೆಚ್ಚಿರುವುದು ಕಂಡುಬಂದಿದೆ ಎಂದು ಆರೋಪಿಸಿದ್ದಾರೆ.
ಇದೇ ವೇಳೆ ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಣ ನೀತಿಯನ್ನ ಟೀಕಿಸಿರುವ ಅವರು, E20 ಈಗ 420 ಆಗಿದೆ – ಜನರ ವಾಹನಗಳ ಪೆಟ್ರೋಲ್ ಅನ್ನು ಕದಿಯಲಾಗುತ್ತಿದೆ.. ಸಾರ್ವಜನಿಕ ವಲಯದ ಹಾಗೂ ಖಾಸಗಿ ತೈಲ ಕಂಪನಿಗಳು ನಿಗದಿತ ಮಿತಿಯನ್ನ ಮೀರಿ ಎಥೆನಾಲ್ ಮಿಶ್ರಣ ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOCL) ಪೆಟ್ರೋಲ್ ಮಾದರಿಯಲ್ಲಿ ಶೇ.31.2ರಷ್ಟು ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಮಾದರಿಯಲ್ಲಿ ಶೇ.30.5ರಷ್ಟು ಎಥೆನಾಲ್ ಅಂಶ ದಾಖಲಾಗಿದೆ. ಕರ್ನಾಟಕದ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಗಳೂರು ಹಾಗೂ ತುಮಕೂರು ಜಿಲ್ಲೆಗಳಿಂದ ಈ ಪೆಟ್ರೋಲ್ ಮಾದರಿಗಳನ್ನ ಸಂಗ್ರಹಿಸಲಾಗಿತ್ತು. ಇಂಡಿಯನ್ ಆಯಿಲ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಮಾತ್ರವಲ್ಲದೆ, ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL), ನಯಾರಾ ಎನರ್ಜಿ ಹಾಗೂ ಶೆಲ್ ಕಂಪನಿಗಳ ಪೆಟ್ರೋಲ್ ಮಾದರಿಗಳನ್ನೂ ಪರೀಕ್ಷೆಗೆ ಒಳಪಡಿಸಲಾಗಿತ್ತು ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.
ಈ ಕುರಿತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ, ಮೋದಿ ಅವರೇ…, ದೇಶದ ವಾಹನಗಳ ಟ್ಯಾಂಕ್ಗಳಿಗೆ ನಿಜವಾಗಿ ಏನನ್ನು ತುಂಬಲಾಗುತ್ತಿದೆ ಎಂಬುದನ್ನು ತಿಳಿಸಿ. ಪೆಟ್ರೋಲ್ನಲ್ಲಿ ಎಷ್ಟು ಪ್ರಮಾಣದ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ? ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ ಮಾಡುತ್ತಿರುವ ಕಂಪನಿಗಳ ವಿರುದ್ಧ ಯಾವಾಗ ಕ್ರಮ ಕೈಗೊಳ್ಳಲಾಗುತ್ತದೆ? ಸರ್ಕಾರದ ನೀತಿಗಳಿಂದ ನಿಜವಾಗಿಯೂ ಯಾರಿಗೆ ಲಾಭವಾಗುತ್ತಿದೆ? ಎಂದು ಪ್ರಶ್ನಿಸಿದ್ದಾರಲ್ಲದೇ, ಎಥೆನಾಲ್ ಮಿಶ್ರಣದ ವಿಚಾರ ಚರ್ಚೆಸೋಣ ಬನ್ನಿ ಅಂದು ಆಹ್ವಾನ ನೀಡಿದ್ದಾರೆ.


