– ಕೋಮು ಗಲಭೆ ಎಬ್ಬಿಸಲು ಈ ರೀತಿ ಮಾಡ್ತಿದ್ದಾರೆ
ವಿಜಯಪುರ: ಮೊನ್ನೆ 11 ಸಾವಿರ ಎಕ್ರೆ ವಕ್ಫ್ ಜಾಗ ಇದೆ ಎಂದಿದ್ದರು. ಈಗ ಇದು 15 ಸಾವಿರ ಎಕ್ರೆಗೆ ಏರಿಕೆಯಾಗಿದೆ. ಹೀಗೆ ಬಿಟ್ಟರೆ ದೇವಸ್ಥಾನ, ವಿಧಾನಸೌಧ ನಮ್ಮದು ಎನ್ನುತ್ತಾರೆ ಎಂದು ವಿಜಯಪುರದ (Vijayapura) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿದ್ದಾರೆ.
Advertisement
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಪಹಣಿಯಲ್ಲಿ ವಕ್ಫ್ ಹೆಸರು ವಿಚಾರವಾಗಿ ಸಚಿವ ಜಮೀರ್ ಅಹ್ಮದ್, ಎಂ.ಬಿ ಪಾಟೀಲ್ ಕೋಮು ಗಲಭೆ ಎಬ್ಬಿಸಲು ಈ ರೀತಿ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಂದು ಪಾಕಿಸ್ತಾನ ನಿರ್ಮಾಣ ಮಾಡುವಂತೆ ವಕ್ಫ್ ಕೆಲಸ ಮಾಡ್ತಿದೆ. ರಾಜ್ಯದಲ್ಲಿ ಎಲ್ಲವೂ ವಕ್ಫ್ ಆಸ್ತಿ ಎಂದು ಹೇಳುತ್ತಾರೆ. ಹಾಗಾದರೆ ಹಿಂದೂಗಳು ಎಲ್ಲಿಗೆ ಹೋಗಬೇಕು? ಹೊನವಾಡದಲ್ಲಿ 1200 ಎಕರೆ ವಕ್ಫ್ ಬೋರ್ಡ್‌ಗೆ ಸೇರ್ಪಡೆಯಾಗಿದೆ. ಇವರು ಕೇವಲ 11 ಎಕರೆ ಎನ್ನುತ್ತಾರೆ. ಯಾಕೆ ಸುಳ್ಳು ಹೇಳುತ್ತಿದ್ದೀರಾ? ಅಲ್ಪಸಂಖ್ಯಾತರ ಮತ ಓಲೈಕೆ ಮಾಡಲು ಈ ರೀತಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಗೆಜೆಟ್ ನೋಟಿಫಿಕೇಷನ್‌ನಲ್ಲಿ ತಪ್ಪಾಗಿ ಬರೆದಿದ್ದರಿಂದ ಗೊಂದಲ ಸೃಷ್ಟಿಯಾಗಿದೆ – ಎಂ.ಬಿ ಪಾಟೀಲ್ ಸ್ಪಷ್ಟನೆ
Advertisement
Advertisement
ನಾವು ರೈತರ ಜೊತೆ ಇದ್ದೇವೆ, ರೈತರಿಗಾಗಿ ಉಚಿತ ಕಾನೂನು ಹೋರಾಟ ಮಾಡುತ್ತೇವೆ. ರಾಜ್ಯದ ಯಾವುದೇ ಮೂಲೆಯಲ್ಲಿ ರೈತರ ಜಮೀನಲ್ಲಿ ವಕ್ಫ್ ಬೋರ್ಡ ಹೆಸರು ಇದ್ದರೂ ಅವರು ನಮ್ಮ ಬಳಿ ಬರಲಿ. ನಮ್ಮ ಶಾಸಕರ ಕಛೇರಿಗೆ ಬಂದು ದಾಖಲಾತಿ ನೀಡಿದರೆ ಅವರ ಪರವಾಗಿ ನಾವು ಕಾನೂನು ಹೋರಾಟ ಮಾಡುತ್ತೇವೆ. ರೈತರು ಆತಂಕ ಪಡಬಾರದು, ಕಾನೂನು ಹೋರಾಟ ಮಾಡೋಣ. ಯಾರಿಗಾದರೂ ನೋಟಿಸ್ ಬಂದರೆ ನಮ್ಮ ಕಛೇರಿಗೆ ಸಂಪರ್ಕ ಮಾಡಿ. ವಿಜಯಪುರ ಜಿಲ್ಲೆ ಮಾತ್ರವಲ್ಲ ಬೇರೆ ಜಿಲ್ಲೆಯ ರೈತರು ಸಹ ನಮ್ಮ ಕಛೇರಿಗೆ ಸಂಪರ್ಕ ಮಾಡಬಹುದು ಎಂದು ಭರವಸೆ ನೀಡಿದರು.
Advertisement
ವಕ್ಫ್ ಮಂಡಳಿಯವರು ದೇವಸ್ಥಾನಕ್ಕೆ ಕೂಡಾ ನೋಟಿಸ್ ನೀಡುತ್ತಿದ್ದಾರೆ. ದೇಶದಲ್ಲಿ ವಕ್ಫ್ ಕಾನೂನು ವಿರುದ್ಧ ಹೋರಾಟ ಮಾಡಲಾಗುವುದು. ನೋಟಿಸ್ ನೀಡಿದ್ದರ ಬಗ್ಗೆ ಕಾನೂನು ಹೋರಾಟಕ್ಕೆ ವಕೀಲರ ತಂಡ ಮಾಡುತ್ತೇವೆ. ರಾಜ್ಯಾದ್ಯಂತ ಪ್ರವಾಸ ಮಾಡಿ ರೈತರಿಗೆ ಜಾಗೃತಿ ಮೂಡಿಸುತ್ತೇವೆ. ಸಚಿವ ಜಮೀರ್ ಪ್ರವಾಸ ಮಾಡಿದ ಜಿಲ್ಲೆಗಳಲ್ಲಿ ಕಾರ್ಯಕ್ರಮ ಮಾಡುತ್ತೇವೆ. ಜಿಲ್ಲೆಯಲ್ಲಿ ವಕ್ಫ್ ಅಧಿಕಾರಿಗಳು ರೈತರಿಗೆ ನೋಟಿಸ್ ನೀಡಿದ್ದಾರೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಮಾತ್ರ ಯಾವುದೇ ವಕ್ಫ್ ಆಸ್ತಿ ಆಗಿಲ್ಲ ಎನ್ನುತ್ತಾರೆ. ವಕ್ಫ್ ಕಾನೂನು ನೆಹರು ಮಾಡಿರುವ ದೊಡ್ಡ ತಪ್ಪು ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾನು ಹೋದಲ್ಲಿ ಎಲ್ಲಾ ನನ್ನ ಮೇಲೆ ಕೇಸ್ ಹಾಕುತ್ತಾರೆ. ನನ್ನ ಮೇಲೆ, ಸಿಟಿ ರವಿ, ಪ್ರತಾಪ್ ಸಿಂಹ, ಸೂಲಿಬೆಲೆ ಮೇಲೆ ಕೇಸ್ ಮಾಡುತ್ತಿದ್ದಾರೆ. ಪಾಪ ಪೊಲೀಸರು ಸರ್ಕಾರ ಹೇಳಿದಂತೆ ಮಾಡುತ್ತಾರೆ. ನನ್ನ ಮೇಲೆ 100 ಕೇಸ್ ಹಾಕಿದರೂ ನಾನು ಯಾವುದಕ್ಕೂ ಹೆದರಲ್ಲ. ಮುಂದೆ ನಮ್ಮ ಸರ್ಕಾರ ಬರುತ್ತೆ. ಆಗ ನಮಗೂ ಮಾಡಲು ಬರುತ್ತೆ ಎಂದು ಎಚ್ಚರಿಕೆ ನೀಡಿದರು.ಇದನ್ನೂ ಓದಿ: ಸ್ವೀಟಿ ಫ್ಯಾನ್ಸ್‌ಗೆ ಬಿಗ್ ಅಪ್‌ಡೇಟ್- 2 ಸಿನಿಮಾಗಳ ಶೂಟಿಂಗ್ ಮುಗಿಸಿದ ನಟಿ