ನವದೆಹಲಿ: ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಘಡದಲ್ಲಿ ಭರ್ಜರಿ ಬಹುಮತ ಪಡೆದು ಅಧಿಕಾರದ ಗದ್ದುಗೆ ಏರಿರುವ ಬಿಜೆಪಿಗೆ ಮುಖ್ಯಮಂತ್ರಿ ಆಯ್ಕೆ Chief Minister Selection) ಕಗ್ಗಂಟಾಗಿ ಪರಿಣಮಿಸಿದೆ. ಡಿಸೆಂಬರ್ 3 ರಂದೇ ಫಲಿತಾಂಶ ಬಂದರೂ ಈವರೆಗೂ ಮುಖ್ಯಮಂತ್ರಿ ಆಯ್ಕೆಯಾಗಿಲ್ಲ. ಸಿಎಂ ಆಯ್ಕೆಗೆ ಶಾಸಕರ ಅಭಿಪ್ರಾಯ ಸಂಗ್ರಹಿಸಲು ಬಿಜೆಪಿ ಹೈಕಮಾಂಡ್ (BJP High Command) ಈಗ ವೀಕ್ಷಕರನ್ನು ನೇಮಿಸಿದೆ.
Advertisement
ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಆಯ್ಕೆ ಸಂಬಂಧ ಕೇಂದ್ರ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ವೀಕ್ಷಕರ ಸಮಿತಿ ರಚಿಸಲಾಗಿದೆ. ಸಮಿತಿಯಲ್ಲಿ ರಾಜ್ಯಸಭೆ ಸಂಸದ ಸರೋಜಾ ಪಾಂಡೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ನಿಯೋಜನೆಯಾಗಿದ್ದಾರೆ. ಮಧ್ಯಪ್ರದೇಶಕ್ಕೆ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ನೇತೃತ್ವದಲ್ಲಿ ವೀಕ್ಷಕರ ಸಮಿತಿ ರಚಿಸಿದ್ದು ಓಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಡಾ.ಕೆ ಲಕ್ಷ್ಮಣ್, ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಾಕ್ರಾರನ್ನು ನಿಯೋಜಿಸಿದೆ. ಇದನ್ನೂ ಓದಿ: ಸರ್ಕಾರದಲ್ಲಿ ಪೇ-ಸಿಎಂ, ಪೇ-ಡಿಸಿಎಂ ಹೆಸ್ರಲ್ಲಿ ಕಮಿಷನ್ ಹಗರಣ – ಸದನದಲ್ಲಿ ಯತ್ನಾಳ್ ಬಾಂಬ್
Advertisement
Advertisement
ಛತ್ತೀಸ್‌ಘಢಕ್ಕೆ ಮುಖ್ಯಮಂತ್ರಿ ಆಯ್ಕೆಗೆ ಕೇಂದ್ರ ಸಚಿವ ಅರ್ಜುನ್ ಮುಂಡಾ ನೇತೃತ್ವದಲ್ಲಿ ವೀಕ್ಷಕರ ನಿಯೋಜನೆ ಮಾಡಿದ್ದು ಸಮಿತಿಯಲ್ಲಿ ಕೇಂದ್ರ ಸಚಿವ ಸರ್ಬನಾಂದ ಸೋನೋವಾಲ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಕುಮಾರ್ ಗೌತಮ್ ನಿಯೋಜನೆ ಮಾಡಿದೆ. ವೀಕ್ಷಕರು ರಾಜ್ಯಗಳಿಗೆ ಭೇಟಿ ಮಾಡಿ ಶಾಸಕರ ಅಭಿಪ್ರಾಯ ಸಂಗ್ರಹಿಸಿಲಿದ್ದು ಶಾಸಕರ ಅಭಿಪ್ರಾಯದ ಮೇಲೆ ಹೈಕಮಾಂಡ್ ಸಿಎಂ ಆಯ್ಕೆ ಮಾಡಲಿದೆ.
Advertisement
ಈ ನಡುವೆ ಮುಖ್ಯಮಂತ್ರಿ ರೇಸ್‌ನಲ್ಲಿ ನಾಯಕರು ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಲಾಭಿ ಆರಂಭಿಸಿದ್ದಾರೆ. ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ರಾಜಸ್ಥಾನ ಮಾಜಿ ಸಿಎಂ ವಸುಂಧರಾ ರಾಜೇ ಭೇಟಿ ಮಾತುಕತೆ ನಡೆಸಿದ್ದಾರೆ. ಇತ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಯೋಗಿ ಬಾಲಕನಾಥ್ ಭೇಟಿ ಚರ್ಚಿಸಿದ್ದಾರೆ. ಇದನ್ನೂ ಓದಿ: ಕಾರು-ಬಸ್ ನಡುವೆ ಮುಖಾಮುಖಿ ಡಿಕ್ಕಿ – ಶಿರಸಿಯಲ್ಲಿ ಭೀಕರ ಅಪಘಾತಕ್ಕೆ ಐವರು ಬಲಿ