ಕಾಬೂಲ್: ಅಫ್ಘಾನಿಸ್ತಾನದಲ್ಲಿ ಭೂಕಂಪನದಿಂದ ಸುಮಾರು 26 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.3 ರಷ್ಟು ತೀವ್ರತೆ ದಾಖಲಾಗಿದೆ.
ಐವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು ಸೇರಿ ಒಟ್ಟು 26 ಜನರು ಈ ಭೂಕಂಪನದಲ್ಲಿ ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಭೂಕಂಪನವು ಪ್ರಾಂತ್ಯದ ಮುಖರ್ ಜಿಲ್ಲೆಯ ನಿವಾಸಿಗಳಿಗೆ ಹಾನಿಯನ್ನುಂಟು ಮಾಡಿದೆ. ಇದನ್ನೂ ಓದಿ: ರಜನಿಕಾಂತ್ ಪುತ್ರಿಗೆ ಡಿವೋರ್ಸ್ ನೀಡಿದ ಧನುಷ್
Advertisement
Advertisement
ಬಾದ್ಘಿಸ್‍ನ ಪಶ್ಚಿಮ ಪ್ರಾಂತ್ಯದ ಖಾದಿಸ್ ಜಿಲ್ಲೆಯಲ್ಲಿ ಭೂಮಿ ಕಂಪಿಸಿದಾಗ ಮನೆಗಳ ಮೇಲ್ಛಾವಣಿ ಕುಸಿದು ಜನರು ಸಾವನ್ನಪ್ಪಿದ್ದಾರೆ ಎಂದು ಪ್ರಾಂತ್ಯದ ವಕ್ತಾರ ಬಾಜ್ ಮೊಹಮ್ಮದ್ ಸರ್ವಾರಿ ಎಎಫ್‍ಪಿಗೆ ತಿಳಿಸಿದ್ದಾರೆ. ಯುಎಸ್ ಜಿಯೋಲಾಜಿಕಲ್ ಸರ್ವೇ ರಿಕ್ಟರ್ ಮಾಪಕದಲ್ಲಿ 5.3 ತೀವ್ರತೆಯನ್ನು ಹೊಂದಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಸಲಿಂಗ ಸಂಗಾತಿ ಜೊತೆಗೆ ವಧು ಎಸ್ಕೇಪ್
Advertisement
Advertisement
ಕಳೆದ 20 ವರ್ಷಗಳಲ್ಲಿ ಅಂತರಾಷ್ಟ್ರೀಯ ನೆರವಿನಿಂದ ಕಡಿಮೆ ಲಾಭವನ್ನು ಪಡೆದಿರುವ, ವಿನಾಶಕಾರಿ ಬರಗಾಲದಿಂದ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಖಾದಿಸ್ ಸಹ ಒಂದಾಗಿದೆ. ಅಫ್ಘಾನಿಸ್ತಾನ ಆಗಾಗ ಭೂಕಂಪನಗಳಿಗೆ ಸಾಕ್ಷಿಯಾಗುತ್ತಿದೆ. ವಿಶೇಷವಾಗಿ ಹಿಂದೂ ಕುಶ್ ಪರ್ವತ ಶ್ರೇಣಿಯಲ್ಲಿ ಹೆಚ್ಚಾಗಿ ಭೂಮಿ ಕಂಪಿಸುತ್ತದೆ. ಇದು ಯುರೇಷಿಯನ್ ಮತ್ತು ಭಾರತೀಯ ಟೆಕ್ಟೋನಿಕ್ ಪ್ಲೇಟ್‍ಗಳ ಜಂಕ್ಷನ್‍ನ ಸಮೀಪದಲ್ಲಿದೆ. ಇದನ್ನೂ ಓದಿ: ಕೆಟ್ಟದಾಗಿ ಮುಟ್ಟಿದ್ದಕ್ಕಾಗಿ ಛೀಮಾರಿ ಹಾಕಿದ ಮಹಿಳೆಯನ್ನೇ ಕೊಲ್ಲಲು ಮುಂದಾದ ವ್ಯಕ್ತಿ ಅರೆಸ್ಟ್