ಚಿಕ್ಕಬಳ್ಳಾಪುರ: ಇಲ್ಲಿನ ಬಾಗೇಪಲ್ಲಿ ತಾಲ್ಲೂಕಿನ ಹಲವು ಹಳ್ಳಿಗಳಲ್ಲಿ ಭೂಮಿ ಕಂಪಿಸಿದ ಅನುಭವ ಉಂಟಾಗಿದ್ದು, ಭೂಮಿಯಿಂದ ಕೇಳಿಬಂದ ಭಾರೀ ಶಬ್ದಕ್ಕೆ ಜನ ಬೆಚ್ಚಿಬಿದ್ದಿದ್ದಾರೆ.
Advertisement
ಇಲ್ಲಿನ ಪೆದ್ದ ತುಮಕೇಪಲ್ಲಿ, ಲಘುಮದ್ದೇಪಲ್ಲಿ, ಗರ‍್ರಾಲದಿನ್ನೆ, ಶಂಖವಾರಂಪಲ್ಲಿ, ಯಲ್ಲಂಪಲ್ಲಿ, ಮದ್ದಲಖಾನೆ, ಈರಗಂಟಪಲ್ಲಿ ಹಾಗೂ ಟೆಂಕಮಾಕಲಪಲ್ಲಿಯಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದ್ದು, ಭಾರೀ ಶಬ್ಧ ಕೇಳಿಬಂದಿದೆ. ಇದನ್ನೂ ಓದಿ: ರಾಜ್ಯದಲ್ಲಿ 126 ಕೇಸ್ – 103 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್
Advertisement
9:30 ಹಾಗೂ 9:45 ಗಂಟೆ ಸುಮಾರಿಗೆ ಎರಡು ಬಾರಿ ಶಬ್ಧ ಕೇಳಿಬಂದಿದೆ. ಇದರಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ಉಂಟಾಗಿದ್ದು, ಆತಂಕದಿಂದಲೇ ಕಾಲ ಕಳೆಯುವಂತಾಗಿದೆ.