ವಿಜಯಪುರದಲ್ಲಿ ಭೂಕಂಪನ: ಜೋರು ಶಬ್ದಕ್ಕೆ ಹೆದರಿ ಮನೆಯಿಂದಾಚೆ ಓಡಿ ಬಂದ ಜನ!

Public TV
1 Min Read
Earthquake

ವಿಜಯಪುರ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದ್ದು, ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.ಇದನ್ನೂ ಓದಿ: ನಾನು ಅವರ ಹಾಸಿಗೆಯ ಮೇಲೆ ಕುಳಿತಿದ್ದೆ – ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮತ್ತೆ ಸಾಕ್ಷಿ ಮಲಿಕ್‌ ಆರೋಪ

ವಿಜಯಪುರ (Vijayapura) ಜಿಲ್ಲೆಯ ತಿಕೋಟಾ (Tikota) ತಾಲೂಕಿನ ಟಕ್ಕಳಕಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಕಳ್ಳಕವಟಗಿ, ಘೋಣಸಗಿ, ಹುಬನೂರ ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಜೊತೆಗೆ ಮಹಾರಾಷ್ಟ್ರ (Maharashtra) ಗಡಿಭಾಗದ ಗ್ರಾಮಗಳಾದ ಮೊರಬಗಿ, ತಿಕ್ಕುಂಡಿ, ಆಸಂಗಿಯಲ್ಲೂ ಭೂಮಿ ನಡುಗಿದ ಅನುಭವ ಆಗಿದೆ.

ಇಂದು (ಅ.22) ಬೆಳಗ್ಗೆ 11:29ಕ್ಕೆ ಜೋರಾದ ಶಬ್ದದೊಂದಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಕಂಪಿಸಿದ ಹಿನ್ನೆಲೆ ಅಡುಗೆ ಮನೆಯಲ್ಲಿನ ಪಾತ್ರೆಗಳು ಕೆಳಗೆ ಬಿದ್ದಿವೆ. ಜೋರು ಶಬ್ದದಿಂದ ಹೆದರಿ ಜನರು ಮನೆಯಿಂದಾಚೆಗೆ ಓಡಿ ಬಂದಿದ್ದಾರೆ.ಇದನ್ನೂ ಓದಿ: ಸೂರ್ಯ ನಟನೆಯ ‘ಕಂಗುವ’ ಚಿತ್ರದ ರೊಮ್ಯಾಂಟಿಕ್‌ ಸಾಂಗ್‌ ಔಟ್‌

Share This Article