ವಿಜಯಪುರ: ಐತಿಹಾಸಿಕ ಜಿಲ್ಲೆಯಲ್ಲಿ ಮತ್ತೆ ಭೂಕಂಪದ Earthquake) ಆತಂಕ ಶುರುವಾಗಿದೆ. ಪದೇ ಪದೇ ಭೂಕಂಪನ ಆಗುತ್ತಿರುವುದಕ್ಕೆ ಜನ ಬೆಚ್ಚಿಬಿದ್ದಿದ್ದಾರೆ.
ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲೆ ನಿರಂತರ ಮಳೆ ಸುರಿಯುತ್ತಿದೆ. ಈ ನಡುವೆ ಬುಧವಾರ ರಾತ್ರಿ 11:42ಕ್ಕೆ ಹಾಗೂ ಗುರುವಾರ ಬೆಳಗ್ಗೆ 6:19ಕ್ಕೆ ನಗರದ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಒಂದೇ ರಾತ್ರಿಯಲ್ಲಿ ಎರಡು ಬಾರಿ ಭೂಮಿ ಕಂಪಿಸಿದೆ. ಇದನ್ನೂ ಓದಿ: 1 ತಿಂಗಳೊಳಗೆ ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್‍ಗಳ ಸಂಚಾರ: KSRTC ಅಧ್ಯಕ್ಷ ಎಂ.ಚಂದ್ರಪ್ಪ
Advertisement
Advertisement
ನಗರದ ರೈಲ್ವೆಸ್ಟೇಷನ್ ಏರಿಯಾ, ರಂಭಾಪುರ ಬಡಾವಣೆ, ಬಸವೇಶ್ವರ ನಗರ, ಗೋಳಗುಮ್ಮಟ ಏರಿಯಾ ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದೆ. ಪದೇ ಪದೇ ಈ ರೀತಿ ಭೂಮಿ ಕಂಪಿಸುತ್ತಿರುವುದರಿಂದ ಜನ ಆತಂಕಕ್ಕೆ ಒಳಗಾಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ 80 ಸ್ಥಾನ ಗಳಿಸಿದ್ರೆ ನನ್ನ ಬೆರಳು ಕತ್ತರಿಸಿ ಕೊಡುತ್ತೇನೆ: ಶಿವನಗೌಡ ನಾಯಕ
Advertisement
Advertisement
ಈ ವಿಚಾರವಾಗಿ ಇತ್ತೀಚೆಗಷ್ಟೇ ವಿಧಾನ ಪರಿಷತ್‍ನಲ್ಲು ಮಾತನಾಡಿದ ಸುನೀಲಗೌಡ ಪಾಟೀಲ (Sunil Gowda Basanagowda Patil) ಅವರು, ಜಿಲ್ಲೆಯಲ್ಲಿ ಈವರೆಗೆ ಸುಮಾರು 52 ದಾರಿ ಭೂಕಂಪನವಾಗಿದೆ. ಮನೆಯ ಹೊರಗಡೆ ಮಲಗಬೇಕೆಂದರೆ ಮಳೆ ಇರುತ್ತದೆ. ಮನೆ ಒಳಗಡೆ ಕುಳಿತುಕೊಳ್ಳಬೇಕೆಂದರೆ ಭೂಕಂಪನದ ಭೀತಿಯಿದೆ. ಈ ಕುರಿತು ಜಿಲ್ಲಾಡಳಿತ ಮತ್ತು ಗಣಿ ಭೂವಿಜ್ಞಾನ ಇಲಾಖೆ ಸ್ಪಷ್ಟ ತಾಂತ್ರಿಕ ಮಾಹಿತಿ ನೀಡುತ್ತಿಲ್ಲ. ಹೀಗಾಗಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ತಜ್ಞರನ್ನು ಕರೆಯಿಸಿ ಭೂಕಂಪನಕ್ಕೆ ಕಾರಣ ಕುರಿತು ಅಧ್ಯಯನ ನಡೆಸಬೇಕು. ಈ ಮೂಲಕ ಜನರಲ್ಲಿರುವ ಭಯವನ್ನು ಹೊಗಲಾಡಿಸಬೇಕು ಎಂದು ಒತ್ತಾಯಿಸಿದ್ದರು.