ರಾಂಚಿ: ಜಾರ್ಖಂಡ್‌ನ (Jharkhand) ಕೆಲವು ಭಾಗಗಳಲ್ಲಿ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಹಿರಿಯ ಹವಾಮಾನ ತಜ್ಞ ಉಪೇಂದ್ರ ಶ್ರೀವಾಸ್ತವ ತಿಳಿಸಿದ್ದಾರೆ.
ರಾಂಚಿಯಿಂದ (Ranchi) ಸುಮಾರು 35 ಕಿಮೀ ದೂರದಲ್ಲಿರುವ ಖುಂತಿ ಜಿಲ್ಲೆಯಲ್ಲಿ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಅದರ ಆಳವು ಐದು ಕಿ.ಮೀಗಳಷ್ಟಿತ್ತು ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ವರದಿ ತಿಳಿಸಿದೆ. ಇದನ್ನೂ ಓದಿ: ಒಂದು ಚುನಾವಣೆಗೆ ಸಲಹೆ ನೀಡಲು 100 ಕೋಟಿ ಪಡೆಯುತ್ತೇನೆ: ಪ್ರಶಾಂತ್ ಕಿಶೋರ್
Advertisement
Advertisement
ಸೆರೈಕೆಲಾ-ಖರ್ಸ್ವಾನ್ ಜಿಲ್ಲೆಯ ಜಮ್‌ಶೆಡ್‌ಪುರ ಮತ್ತು ಕಂದ್ರದಲ್ಲೂ ಕಂಪನದ ಅನುಭವವಾಗಿದೆ. ಆದರೆ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ತಲೆಮರೆಸಿಕೊಳ್ಳಲು 8 ಮೊಬೈಲ್, 20 ಸಿಮ್, 6 ನಕಲಿ ಹೆಸರು – ಆರೋಪಿಯನ್ನು 1,600 ಕಿ.ಮೀ ಬೆನ್ನಟ್ಟಿ ಹಿಡಿದ ಪೊಲೀಸರು!
Advertisement