ಮುಂಬೈ: ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ 3.3 ತೀವ್ರತೆಯಲ್ಲಿ ಭೂಕಂಪ ಸಂಭವಿಸಿದೆ.
ಮಂಗಳವಾರ ಬೆಳಗ್ಗೆ 9.47ರ ಸುಮಾರಿಗೆ 5 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಆದರೆ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ. ಇದನ್ನೂ ಓದಿ: ಇದು 25 ವರ್ಷಗಳ ದೂರದೃಷ್ಟಿಯ ಬಜೆಟ್: ನಿರ್ಮಲಾ ಸೀತಾರಾಮನ್
Earthquake of Magnitude:3.3, Occurred on 01-02-2022, 09:47:11 IST, Lat: 17.45 & Long: 73.83, Depth: 5 Km ,Location: Satara, Maharashtra, India for more information download the BhooKamp App https://t.co/nj45h3CK4B@Indiametdept @ndmaindia pic.twitter.com/2T6xwT1H40
— National Center for Seismology (@NCS_Earthquake) February 1, 2022
ಜನವರಿ 17 ರಂದು 30 ನಿಮಿಷಗಳ ಅವಧಿಯಲ್ಲಿ ಈಶಾನ್ಯ ಪ್ರದೇಶದ ಕೆಲವು ಭಾಗಗಳಲ್ಲಿ 3.5 ಮತ್ತು 3.8ರ ತೀವ್ರತೆಯಲ್ಲಿ ಎರಡು ಬಾರಿ ಭೂಕಂಪ ಸಂಭವಿಸಿದೆ. ಮೊದಲ ಬಾರಿಗೆ ಅಸ್ಸಾಂನ ಕ್ಯಾಚಾರ್ ಜಿಲ್ಲೆಯಲ್ಲಿ ಮಧ್ಯಾಹ್ನ 2.11ರ ವೇಖೆಗೆ 3.5 ತೀವ್ರತೆಯಲ್ಲಿ ಭೂಕಂಪ ಸಂಭವಿಸಿತ್ತು. ಎರಡನೇ ಬಾರಿಗೆ ಮಣಿಪುರದ ಕಾಂಗ್‌ಪೊಕ್ಪಿ ಪ್ರದೇಶದಲ್ಲಿ ಮಧ್ಯಾಹ್ನ 2.39ಕ್ಕೆ 3.8 ತೀವ್ರತೆಯಲ್ಲಿ ಭೂಕಂಪ ಸಂಭವಿಸಿತ್ತು. ಇದನ್ನೂ ಓದಿ: ವಾಣಿಜ್ಯ LPG ಸಿಲಿಂಡರ್ ಬೆಲೆ 91.50 ರೂ. ಇಳಿಕೆ