ಕಾಬುಲ್: ಅಫ್ಘಾನಿಸ್ತಾನದ ಹಿಂದೂ ಕುಶ್ (Hindu Kush) ಪ್ರದೇಶದಲ್ಲಿ 5.3 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಭಾರತದ ರಾಷ್ಟ್ರೀಯ ಭೂಕಂಪನ ಕೇಂದ್ರ (NCS) ತಿಳಿಸಿದೆ.
ಗುರುವಾರ (ಅ.1) ಮುಂಜಾನೆ 6:59ರ ಸುಮಾರಿಗೆ 5.3 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 126 ಕಿಲೋಮೀಟರ್ ಆಳದಲ್ಲಿ ಭೂಕಂಪನ ಕೇಂದ್ರ ಬಿಂದು ಪತ್ತೆಯಾಗಿದೆ. ಇದನ್ನೂ ಓದಿ: ಚುನಾವಣೆಗೆ ತಿಂಗಳುಗಳು ಬಾಕಿ ಇರುವಾಗಲೇ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜಾ ವಾರಿಂಗ್ ರಾಜೀನಾಮೆ
EQ of M: 5.3, On: 01/10/2026 06:59:20 IST, Lat: 35.981 N, Long: 68.700 E, Depth: 126 Km, Location: Afghanistan.
For more information Download the BhooKamp App https://t.co/5gCOtjdtw0 @DrJitendraSingh @OfficeOfDrJS @tummalasrini @GSuresh_NCS @ndmaindia pic.twitter.com/1QelcCg2Mn— National Center for Seismology (@NCS_Earthquake) October 1, 2026
ಭೂಕಂಪನದಲ್ಲಿ ಸಾವು-ನೋವಿನ ಬಗ್ಗೆ ಯಾವುದೇ ವರದಿಯಾಗಿಲ್ಲ. ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಸುತ್ತಮುತ್ತಲಿನ ಹಿಂದೂ ಕುಶ್ ಪ್ರದೇಶವು ಭೂಕಂಪನ ಪೀಡಿತ ಪ್ರದೇಶಗಳಲ್ಲಿ ಒಂದಾಗಿದೆ.

