ಕಾಬೂಲ್/ನವದೆಹಲಿ: ಅಫ್ಘಾನಿಸ್ತಾನದಲ್ಲಿ (Afghanistan) 5.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಸೀಸ್ಮಾಲಾಜಿಕಲ್ ಸೆಂಟರ್ (EMSC) ವರದಿ ಮಾಡಿದೆ.
Did you feel the earthquake? Because my family isn’t believing me—I felt it for a second, it definitely happened … #delhi #earthquake pic.twitter.com/9Pvk4LUA7b
— SHILPA KP (@kapoor_aamaya) April 15, 2025
ಬಾಗ್ಲಾನ್‌ನಿಂದ ಪೂರ್ವಕ್ಕೆ 164 ಕಿಮೀ ದೂರದಲ್ಲಿ ಹಾಗೂ ಭೂಮಿಯ ಮೇಲ್ಮೈನಿಂದ 121 ಕಿಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಇಎಂಎಸ್‌ಸಿ ಮೊದಲು ಭೂಕಂಪದ (Earthquake) ತೀವ್ರತೆಯನ್ನು 6.4 ತೀವ್ರತೆ ಎಂದು ವರೆದಿ ಮಾಡಿತ್ತು. ಬಳಿಕ ಪರಿಷ್ಕರಿಸಿ 5.6 ಎಂದು ಉಲ್ಲೇಖಿಸಿದೆ. ಇದರ ಪರಿಣಾಮ ದೆಹಲಿ ಮತ್ತು ಎನ್‌ಸಿಆರ್ ಪ್ರದೇಶ ಸೇರಿದಂತೆ ಭಾರತದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಇದನ್ನೂ ಓದಿ: ಬೆಂಗ್ಳೂರಿಗೆ ಸೆಡ್ಡು ಹೊಡೆಯಲು ಆಂಧ್ರ ಸರ್ಕಾರದಿಂದ ಭಾರೀ ಆಫರ್ – ಟಿಸಿಎಸ್‌ಗೆ 99 ಪೈಸೆಗೆ 21 ಎಕ್ರೆ ಭೂಮಿ
ಸದ್ಯ ಹೆಚ್ಚಿನ ಹಾನಿಯಾಗಲಿ, ಸಾವುನೋವುಗಳಾಗಲಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಇದನ್ನೂ ಓದಿ: National Herald Case| ಫಸ್ಟ್ ಟೈಂ ರಾಹುಲ್, ಸೋನಿಯಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ
ದೆಹಲಿಯಲ್ಲಿ ಭೂಮಿ ಕಂಪಿಸಿದ ಅನುಭವ ಉಂಟಾಗಿದ್ದು, ಹಲವರು ಇದರ ವಿಡಿಯೋವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇನ್ನೂ ಕೆಲವರು ಮೆಮ್ಸ್‌ಗಳನ್ನು ಹಂಚಿಕೊಳ್ಳುವ ಮೂಲಕ ವ್ಯಂಗ್ಯ ಮಾಡಿರುವುದು ಕಂಡುಬಂದಿದೆ. ಇದನ್ನೂ ಓದಿ: ಗಲಭೆಕೋರರಿಗೆ ದಂಡವೇ ಒಳ್ಳೆ ಚಿಕಿತ್ಸೆ: ಬಂಗಾಳ ಹಿಂಸಾಚಾರಕ್ಕೆ ಯೋಗಿ ಆದಿತ್ಯನಾಥ್ ಕಿಡಿ