ನವದೆಹಲಿ: ಪಾಕಿಸ್ತಾನದಲ್ಲಿ (Pakistan) ಬುಧವಾರ ಮಧ್ಯಾಹ್ನ 5.8 ತೀವ್ರತೆಯ ಪ್ರಬಲ ಭೂಕಂಪ (Earthquake) ಸಂಭವಿಸಿದ ಪರಿಣಾಮ ದೆಹಲಿ-ಎನ್‌ಸಿಆರ್‌ನ (Delhi-NCR) ಕೆಲವು ಭಾಗಗಳಲ್ಲಿ ಲಘು ಕಂಪನದ ಅನುಭವ ಆಗಿದೆ.
ಮಧ್ಯಾಹ್ನ 12:58ರ ಸುಮಾರಿಗೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಡಿಜಿ ಖಾನ್(ಶಾದಿ ವಾಲಾ) 33 ಕಿ.ಮೀ ಆಳದಲ್ಲಿ ಭೂಕಂಪನ ಕೇಂದ್ರ ಬಿಂದು ಪತ್ತೆಯಾಗಿದೆ. ಇದನ್ನೂ ಓದಿ: ರಾಹುಲ್ ಹೇಳಿಕೆಯಿಂದ ಕಾಂಗ್ರೆಸ್ ಮೀಸಲಾತಿ ವಿರೋಧಿ ನೀತಿ ಬಯಲಾಗಿದೆ: ಅಮಿತ್ ಶಾ
Advertisement
Advertisement
ಪಾಕಿಸ್ತಾನದ ಪೇಶಾವರ, ಇಸ್ಲಾಮಾಬಾದ್ ಮತ್ತು ಲಾಹೋರ್‌ನಲ್ಲಿ ಪ್ರಬಲ ಭೂಕಂಪ ಉಂಟಾಗಿದ್ದು, ದೆಹಲಿ, ನೋಯ್ಡಾ ಮತ್ತು ಪಂಜಾಬ್‌ನ ಕೆಲವು ಭಾಗಗಳಲ್ಲಿ ಲಘು ಕಂಪನದ ಅನುಭವವಾಗಿದೆ. ಅಲ್ಲದೇ ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ಜಮ್ಮು ಮತ್ತು ಕಾಶ್ಮೀರದಲ್ಲೂ ಭೂಮಿ ಕಂಪಿಸಿದೆ. ಇದುವರೆಗೆ ಯಾವುದೇ ಪ್ರಾಣಹಾನಿ ಉಂಟಾಗಿಲ್ಲ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಸಿಎಂ ರೇಸ್‌ನಲ್ಲಿ ಯಾರೂ ಇಲ್ಲ, ಸಿದ್ದರಾಮಯ್ಯನವರೇ ಮುಂದುವರಿಯುತ್ತಾರೆ: ದಿನೇಶ್ ಗುಂಡೂರಾವ್
Advertisement